2023ರ ಕರ್ನಾಟಕ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ ಗೆಲುವಿನ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ರು. ʻನಾನು ಪ್ರಚಾರ ಸಭೆಗಳಲ್ಲಿ ಹಾಗೂ ನಮ್ಮ ಹೈಕಮಾಂಡ್ ನವರ ಬಳಿ ಸುಮಾರು 130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ, ನನ್ನ ಮಾತು ನಿಜವಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಸರ್ಕಾರ ಮಾಡಲಿದೆ ಎಂದು ಹೇಳಿದ್ದೆ, ಇದು ಕೂಡ ಸತ್ಯವಾಗಿದೆ. ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದರು, ಈ ಸರ್ಕಾರ ಎಷ್ಟು ಬೇಗ ತೊಲಗಿದ್ರು ಅಷ್ಟು ಒಳ್ಳೆಯದು ಎಂದು ಜನ ಕಾಯುತ್ತಿದ್ದರು. ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಅಂತ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದರು. ಬಳಿಕ ಮಾತ್ನಾಡಿದ ಅವರು, ʻನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು 150 ಸೀಟು ಗೆಲ್ಲುತ್ತೇವೆ ಎನ್ನುತ್ತಿದ್ದರು, ಅಮಿತ್ ಶಾ ಅವರ ಬಳಿ ಗೃಹ ಖಾತೆ ಇದೆ, ಇಂಟಲಿಜೆನ್ಸ್ ಏಜೆನ್ಸಿಗಳು ಇವೆ, ಅವರಿಗೆ ಸೋಲುತ್ತೇವೆ ಎಂದು ಗೊತ್ತಿದ್ದೂ ಕೂಡ ಸುಳ್ಳು ಹೇಳುತ್ತಿದ್ದರು. ಹಣದ ಬಲದಿಂದ ಹೇಗಾದರೂ ಮಾಡಿ ಚುನಾವಣೆ ಗೆಲ್ಲಬೇಕು ಎಂದು ಪ್ರಯತ್ನಿಸಿದ್ದರು ಆದರೆ ಜನ ಬಿಜೆಪಿಯನ್ನು ಸೋಲಿಸಬೇಕು ಎಂದು ನಿರ್ಧಾರ ಮಾಡಿದ್ದರು ಅಂತ ಸಿದ್ದರಾಮಯ್ಯ ಹೇಳಿದ್ರು.
661 ಕೋಟಿ ಮೌಲ್ಯದ ಆಸ್ತಿ ಸೀಜ್ – ರಾಹುಲ್ & ಸೋನಿಯಾ ಗಾಂಧಿಗೆ ED ಬಿಗ್ ಶಾಕ್
ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದು ಇದೀಗ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗಿದೆ. ಈಗಾಗಲೇ ಸ್ಥಿರಾಸ್ತಿಗಳ ಮುಟ್ಟುಗೋಲಿಗೆ ಜಾರಿ...
Read moreDetails