ಬೆಂಗಳೂರು: ಪ್ರಸಿದ್ದ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ.
ನಗರದ ಪ್ರತಿಷ್ಠಿತ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು
ಎರಡು ಪ್ರತ್ಯೇಕ ಬೈಕ್‌ಗಳಲ್ಲಿ ಭಾನುವಾರ ಮುಂಜಾನೆ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದರು. ಬಿರಿಯಾನಿ ತಿಂದು ವಾಪಾಸ್ ಬರುವಾಗ ಬೆಳಗ್ಗೆ 5.30ರ ಸುಮಾರಿಗೆ ಕಾಡಾ ಅಗ್ರಹಾರ ಬಳಿ 6-7 ಮಂದಿ ದುಷ್ಕರ್ಮಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿದ್ರು. ಬಳಿಕ ವಿದ್ಯಾರ್ಥಿಗಳನ್ನ ಮೇಡಹಳ್ಳಿ ಕಡೆ ಕರೆದೊಯ್ದು, 3 ಮೊಬೈಲ್ ಕಸಿದು, UPI ಮೂಲಕ 1.10 ಲಕ್ಷ ರೂ. ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದರು. ಹಾಗೆ 40 ಸಾವಿರ ರೂ. ನಗರದು ಕಸಿದು ಪರಾರಿಯಾಗಿದ್ದರು.
ಘಟನೆ ಬಗ್ಗೆ ಓರ್ವ ವಿದ್ಯಾರ್ಥಿ ಆವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದ. ದೂರು ಆಧರಿಸಿ ಪ್ರಕರಣ ದಾಖಲಿಸಿರುವ ಪೊಲೀಸರು ಕೃತ್ಯ ಎಸಗಿದ ಕೆ.ಜಿ.ಹಳ್ಳಿಯ ಅರ್ಫಾತ್ ಅಹಮದ್ ಎಂಬಾತನನ್ನ ಬಂಧಿಸಿದ್ದಾರೆ. ಹಾಗೆ ಉಳಿದ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.








