• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

Share on WhatsAppShare on FacebookShare on Telegram

ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಸೇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ADVERTISEMENT

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ (ಸೆಪ್ಟೆಂಬರ್ 12) ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home ಗೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ.

ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎಂದು ಸೂಚನೆ ನೀಡಿದರು.

ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನೆ ಕೈರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು. ಇದರಲ್ಲಿ ವಿಳಂಬ ಸರಿಯಲ್ಲ.

ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಅಧಿಕಾರಿಗಳಿಗೆ ಸೌಲಭ್ಯ ನೀಡುವುದು, ಜನರ ಸಮಸ್ಯೆಗೆ ಸ್ಪಂದಿಸಿ ಉತ್ತಮವಾಗಿ ಕೆಲಸ ಮಾಡಬೇಕೆಂಬ ಉದ್ದೇಶದಿಂದ. ನೀವು ಚೆನ್ನಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಕೆಲಸ ಮಾಡದಿದ್ದರೆ ಕೆಟ್ಟ ಹೆಸರು ಬರುತ್ತದೆ. ಅದಕ್ಕೋಸ್ಕರ ನಿಮ್ಮ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು, ಔಷಧ ಪ್ರಿಸ್ಕ್ರಿಪ್ಷನ್ ಬರೆಯುವುದು ಇವೆಲ್ಲ ಆಗಬಾರದು. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಸ್ಮಶಾನಗಳಿಗೆ ಮತ್ತು ಖಬರ್ಸ್ತಾನ್ಗಳಿಗೆ ಕೂಡಲೇ ಜಾಗ ಒದಗಿಸಬೇಕು. ಶಾಲಾ ಕಟ್ಟಡ, ಅಂಗನವಾಡಿ, ಆರೋಗ್ಯ ಕೇಂದ್ರ ಸ್ಮಶಾನಗಳಿಗೆ ಜಾಗ ಕೂಡಲೇ ಗುರುತಿಸಿ ಕೊಡಬೇಕು. ಸಾರ್ವಜನಿಕರಿಗೆ ಭೇಟಿ ಸಮಯ ನಿಗದಿ ಮಾಡಬೇಕು. ಕೇಂದ್ರ ಕಚೇರಿಯಲ್ಲಿರುವಾಗ ಸಾರ್ವಜನಿಕರಿಗೆ ಸಮಯ ನಿಗದಿ ಮಾಡಬೇಕು. ಆ ಸಮಯದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಕೂಡಲೇ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ತಿಳಿ ಹೇಳಿದರು.

Tags: CM SiddaramaiahhumanityPublic Serviceಮನುಷ್ಯತ್ವಮುಖ್ಯಮಂತ್ರಿ ಸಿದ್ದರಾಮಯ್ಯಸಾರ್ವಜನಿಕ ಸೇವೆ
Previous Post

ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿ ಜನರ ನಿರೀಕ್ಷೆಗೆ ಸ್ಪಂದಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನೆಹರು ಕಾಲದಿಂದಲೂ ಹಿಂದಿ ಹೇರಿಕೆ ಇದೆ: ಸಂಗೀತ ನಿರ್ದೇಶಕ ಹಂಸಲೇಖ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ಹಂಸಲೇಖ

ನೆಹರು ಕಾಲದಿಂದಲೂ ಹಿಂದಿ ಹೇರಿಕೆ ಇದೆ: ಸಂಗೀತ ನಿರ್ದೇಶಕ ಹಂಸಲೇಖ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada