• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಪ್ರತಿಧ್ವನಿ by ಪ್ರತಿಧ್ವನಿ
July 14, 2025
in Top Story, ಕರ್ನಾಟಕ, ರಾಜಕೀಯ
0
ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Share on WhatsAppShare on FacebookShare on Telegram
ADVERTISEMENT

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ

ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ

ಧಾರವಾಡ, ಜುಲೈ14: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ ಜನರ ಜೀವ ಮುಖ್ಯವಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರು ಹೇಳಿದರು.

Tejasvi Surya : ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ತಿರುಗೇಟು #pratidhvani

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಬ್ಯಾಂಕರ್ಸ್‍ಗಳೊಂದಿಗೆ ರೈತ ಆತ್ಮಹತ್ಯೆ ಪ್ರಕರಣಗಳು ಮತ್ತು ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಭೆ ಜರುಗಿಸಿ, ಮಾತನಾಡಿದರು.

ಸಾಲ ವಸೂಲಾತಿಯಲ್ಲಿ ಮಾನವೀಯತೆ ಮೀರಿ ಯಾರೂ ವರ್ತಿಸಬಾರದು. ಜನರ ಜೀವ ಮುಖ್ಯ. ರೈತ ಆತ್ಮಹತ್ಯೆಗಳು ಯಾವ ಕಾರಣಕ್ಕಾಗಿ ಮತ್ತು ಯಾವ ಸಂದರ್ಭಗಳಿಂದ ಘಟಿಸುತ್ತಿವೆ ಎಂಬುವುದರ ಕುರಿತು ಅಧ್ಯಯನ ಮಾಡಲು ಕೃಷಿ ವಿಶ್ವವಿದ್ಯಾಲಯ, ಕಂದಾಯ, ಕೃಷಿ ಇಲಾಖೆ, ಬ್ಯಾಂಕ್ ಅಧಿಕಾರಿ ಹಾಗೂ ಸಾಮಾಜಿಕ ತಜ್ಞರ ಒಳಗೊಂಡ ಸಮಿತಿಯನ್ನು ರಚಿಸಲು ಕ್ರಮವಹಿಸಲಾಗುತ್ತದೆ. ಕೃಷಿ ತಜ್ಞರನ್ನು ಸಹ ಭಾಗಿ ಮಾಡಿಕೊಂಡು ವೈಜ್ಞಾನಿಕವಾಗಿ ಅಧ್ಯಯನವನ್ನು ಮಾಡಲಾಗುತ್ತದೆ. ಬ್ಯಾಂಕ್ ಅಧಿಕಾರಿಗಳು ರೈತರ ಮನೆಗಳಿಗೆ ಹೋಗಿ ಸಾಲ ಮರುಪಾವತಿಗಾಗಿ ತಿಳಿವಳಿಕೆ ನೀಡಬೇಕು. ಅವರ ಆರ್ಥಿಕ ಸ್ಥಿತಿ, ಉದ್ಯೋಗ ಬಗ್ಗೆ ತಿಳಿದು ಕಾಲಾವಕಾಶ ನೀಡಬೇಕೆಂದು ಅವರು ಹೇಳಿದರು.

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳ ಮನೆಗಳಿಗೆ ಇಂದು ಭೇಟಿ ನೀಡಿದ್ದೇವೆ. ರೈತರ ಆತ್ಮಹತ್ಯೆಯ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ಧಾರವಾಡ ಜಿಲ್ಲೆಯಲ್ಲಿ ಸುಮಾರು ಐವತ್ತು ಸಾವಿರ ಅಕೌಂಟ್‍ಗಳು ಎನ್‍ಪಿ (ಕಾರ್ಯನಿರ್ವಹಿಸದ ಖಾತೆ) ಆಗಿವೆ. ಈ ಎಲ್ಲ ಎನ್.ಪಿ ಬ್ಯಾಂಕ್ ಖಾತೆಗಳನ್ನು ಎ,ಬಿ,ಸಿ ವರ್ಗ ಮಾಡಿಕೊಂಡು ಅತಿಯಾಗಿ ಯಾರು ತೊಂದರೆಯಲ್ಲಿ ಇದ್ದಾರೆ, ಅವರನ್ನು ಪತ್ತೆ ಹಚ್ಚಬೇಕು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಅವರಿಗೆ ಯೋಜನೆಗಳ ಸೌಲಭ್ಯಗಳು ಸಿಗುತ್ತಿವೆಯೋ, ಇಲ್ಲವೋ, ಎಂದು ತಿಳಿದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅವರು ಹೇಳಿದರು.

ರೈತರ ಏಳಿಗೆಯೇ ನಮ್ಮ ಸರ್ಕಾರದ ಗುರಿ ಆಗಿದೆ. ರೈತರಿಗೆ ಸಕಾಲದಲ್ಲಿ ಬೀಜ, ಗೊಬ್ಬರ ಮತ್ತು ಕೃಷಿ ಉಪಕರಣಗಳು ಲಭ್ಯವಾಗುತ್ತಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಕೃಷಿ ಇಲಾಖೆ ಖಾತ್ರಿಪಡಿಸಬೇಕು. ಬೆಳೆ ವಿಮೆ ಯೋಜನೆಯ ಲಾಭ ಪ್ರತಿಯೊಬ್ಬ ಅರ್ಹ ರೈತನಿಗೂ ತಲುಪಬೇಕು ಎಂದು ಹೇಳಿದರು.

ಸರ್ಕಾರದಿಂದ ಸಿಗುವ ಪಿಂಚಣಿ, ಪರಿಹಾರ, ಸಹಾಯಧನ ಮುಟ್ಟುವಂತಿಲ್ಲ
ರಾಷ್ಟ್ರೀಕೃತ ಬ್ಯಾಂಕ್, ಯಾವುದೇ ಬ್ಯಾಂಕ್ ಇದ್ದರೂ ಸಹ ಎನ್.ಪಿ ಆಗಿರುವ ಅಕೌಂಟ್‍ಗಳಿಗೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಸಹಾಯಧನ, ಪಿಂಚಣಿ, ಬೆಳೆ ಪರಿಹಾರ, ವಿಮೆ ಪರಿಹಾರ, ಇತರ ಸಾಲ ಸೌಲಭ್ಯಗಳಿಂದ ಯಾವುದೇ ರೀತಿ ಹಣ ಅವರ ಉಳಿತಾಯ ಖಾತೆಗೆ ಬಂದರೂ ಯಾವುದೇ ಕಾರಣಕ್ಕೂ ಬ್ಯಾಂಕ್ ನವರು ಅದನ್ನು ಸಾಲಕ್ಕೆ ಮರು ಹೊಂದಾಣಿಕೆ ಅಥವಾ ಸಾಲದ ಖಾತೆಗೆ ಜಮೆ ಪಡೆಯುವ ಅವಕಾಶವಿಲ್ಲ. ಮತ್ತು ಈ ರೀತಿ ಕ್ರಮ ವಹಿಸಲು ಬ್ಯಾಂಕ್‍ನವರಿಗೆ ಯಾವುದೇ ರೀತಿ ಕಾನೂನಿನಲ್ಲಿ ಅವಕಾಶವಿಲ್ಲ. ಇದರ ಬಗ್ಗೆ ಮಾನ್ಯ ಮುಖ್ಯಮಂತ್ರಿ ಅವರ ಜೊತೆ ಚರ್ಚೆಯನ್ನು ಸಹ ಮಾಡುತ್ತೇನೆ. ಕ್ರಾಪ್ ಲೋನ್ ಆಗಿರಲಿ, ಬೇರೆ ಯಾವುದೇ ರೀತಿಯ ಲೋನ್ ತೆಗೆದುಕೊಂಡರು ಸರ್ಕಾರದ ಸಬ್ಸಿಡಿಗೆ ಅದನ್ನು ಅಟ್ಯಾಚ್ ಮಾಡಬಾರದು ಎಂದು ಸಚಿವ ಸಂತೋಷ ಲಾಡ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆಕೊಟ್ಟರು.

ಸಭೆಯಲ್ಲಿ ಕುಂದಗೋಳ ಶಾಸಕ ಎಂ. ಆರ್. ಪಾಟೀಲ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಗೋಪಾಲ ಎಂ. ಬ್ಯಾಕೋಡ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೆ.ಸಿ.ಭದ್ರಣ್ಣವರ, ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜ ಗಡಾದ, ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲೆಯ ಎಲ್ಲ ಬ್ಯಾಂಕ್‍ಗಳ ಪ್ರತಿನಿಧಿಗಳು ಮತ್ತು ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕಂದಾಯ, ಭೂದಾಖಲೆಗಳ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

CM Change ಆಗ್ತಾರೆ ಅಂತ ಸಚಿವ ಜೋಶಿ ಹೇಳ್ತವ್ರೆ ಅಂದ್ರೆ ಸಚಿವ ಲಾಡ್ ಫುಲ್ ಗರಂ ಆದ್ರು  #pratidhvani
Tags: minister santosh ladSantosh Ladsantosh lad ballarysantosh lad biographysantosh lad congresssantosh lad dharwadsantosh lad interviewsantosh lad life storysantosh lad livesantosh lad ministersantosh lad mlasantosh lad newssantosh lad on bjpsantosh lad on modisantosh lad on pm modisantosh lad slams modisantosh lad speechsantosh lad statussantosh lad teamsantosh lad today newssantosh lad videosantosh lad vs pm modisantosh lad with ajit
Previous Post

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

Next Post

ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada