ಈಗಾಗಲೇ ಟೈಟಲ್ ಹಾಗೂ ಟೀಸರ್ ಮೂಲಕವೇ ಸಿನಿರಸಿಕರ ಕುತೂಹಲ ಹೆಚ್ಚಿಸಿರುವ ವಿನಯ್ ರಾಜ್ಕುಮಾರ್ ಅಭಿನಯದ ಬಹುನಿರೀಕ್ಷಿತ ಪೆಪೆ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆಯಲಾಗಿದೆ.
ಶ್ರೀಲೇಶ್ ನಾಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪೆಪೆ ಚಿತ್ರವು ಸಕಲೇಶಪುರದಲ್ಲಿ ನಡೆದ ಕ್ಲೈಮ್ಯಾಕ್ಸ್ ಸೀನ್ ಶೂಟಿಂಗ್ ಬಳಿಕ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ಸಾಹಸ ನಿರ್ದೇಶಕ ರವಿವರ್ಮಾ ಕಂಪೋಸ್ ಮಾಡಿದ ಕ್ಲೈಮ್ಯಾಕ್ಸ್ ಫೈಟಿಂಗ್ ಸೀನ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಶುಭಂ ಹೇಳಲಾಗಿದೆ.
ಚಿತ್ರದಲ್ಲಿ ಗ್ಯಾಂಗ್ ಲೀಡರ್ ಪಾತ್ರದಲ್ಲಿ ವಿನಯ್ ರಾಜ್ಕುಮಾರ್ ಕಾಣಿಸಿಕೊಳ್ಳುತ್ತಿದ್ದು ಟೀಸರ್, ಪೋಸ್ಟರ್ ಝಲಕ್ ಕಂಡು ದೊಡ್ಮನೆ ಅಭಿಮಾನಿಗಳು, ಸಿನಿರಸಿಕರು ಥ್ರಿಲ್ ಆಗಿದ್ದು, ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಕಾಜಲ್ ಕುಂದರ್, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್, ಬಾಲಾ ರಾಜ್ವಾಡಿ ಒಳಗೊಂಡ ತಾರಾಬಳಗವಿದೆ.
ಚಿತ್ರಕ್ಕೆ ಉದಯ್ ಮತ್ತು ಶ್ರೀರಾಮ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದು ಅಭಿಷೇಕ್ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೊಡಗು, ಸಕಲೇಶಪುರದಲ್ಲಿ ಸಿನಿಮಾದ ಬಹುತೇಕಭಾಗವನ್ನ ಚಿತ್ರೀಕರಿಸಲಾಗಿದೆ.
ಪೆಪೆ ಜೊತೆಗೆ ಗ್ರಾಮಾಯಣ, ಅದೊಂದಿತ್ತು ಕಾಲ ಸಿನಿಮಾಗಳಲ್ಲೂ ವಿನಯ್ ಬ್ಯುಸಿಯಾಗಿದ್ದಾರೆ.