ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಕೋರ್ಟ್ ಸೆಪ್ಟಂಬರ್ 02ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಇಂದು ಬೆಳಗ್ಗೆ 11 ಗಂಟೆಯಿಂದಲೇ ಆರಂಭವಾದ ಅರ್ಜಿ ವಿಚಾರಣೆಯನ್ನು ಆಲಿಸಿದ ನ್ಯಾಯಾಲಯ ಮಧ್ಯಾಹ್ನ 1:30ಕ್ಕೆ ವಿಚಾರಣೆಯನ್ನು ಒಂದು ಗಂಟೆಗಳ ಕಾಲ ಮುಂದೂಡಿತ್ತು.ತದನಂತರ ಮತ್ತೆ ವಿಚಾರಣೆ ಆರಂಭಿಸಿದ ಹೈಕೋರ್ಟ್ ಸುದೀರ್ಘ ವಿಚಾರಣೆಯ ಬಳಿಕ ಇದೀಗ ಸೆಪ್ಟಂಬರ್ 02ಕ್ಕೆ ಮುಂದೂಡಿದೆ.