• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಲೆಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 15, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT
Siddaramaiah On PM Modi : ಮೋದಿ ಮಾಡಿರುವ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ಖಂಡಿಸ್ತೀವಿ #pratidhvani #bjp

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಬೆಲೆಏರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆ ಏರಿಕೆಯ ಕ್ರಮವನ್ನು ರಾಜ್ಯ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿಂದ ಗೃಹಬಳಕೆಯ ಎಲ್ ಪಿ ಜಿ ದರ ಈಗ 1000 ರೂಗಳನ್ನು ದಾಟಿದೆ. ಈ ಬೆಲೆಏರಿಕೆ ದಿನನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ನೀಟ್ ಪರೀಕ್ಷೆ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯ..

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಯುಜಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರವು ನೀಟ್ ಯುಜಿ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ವಿಫಲರಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಎಸ್ ಐ ಆರ್ ಪ್ರಕ್ರಿಯೆ..

ಕರ್ನಾಟಕದಲ್ಲಿ ಎಸ್ ಐ ಆರ್ ಪ್ರಕ್ರಿಯೆ ಪ್ರಾರಂಭವಾಗಲಿರುವ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಎಸ್ ಐ ಆರ್ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದಕ್ಕೆ ಬೇಕಾದ ಸಿದ್ದತೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Tags: bjp karnatakaCM SiddaramaiahCongress Governmentdiesel price hikeElection Commission IndiaGovernment of IndiaKarnataka GovernmentNarendra ModiNEETNEET Exampetrol price hikeSIRUG
Previous Post

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

Next Post

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ - ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!