ಕೋವಿಡ್ ಸಂಕಷ್ಟದ ನಡುವೆ ಬೆಲೆ ಏರಿಕೆಯ ಬಿಸಿ: ಪೆಟ್ರೊಲ್, ಡೀಸೆಲ್ ದರ ಹೆಚ್ಚಳ

ಕರೋನಾ ಸಂಕಷ್ಟದ ನಡುವೆಯೇ ಈಗ ಜನಸಾಮಾನ್ಯರಿಗೆ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆಯ ಬಿಸಿತಟ್ಟಿದೆ. ದೇಶಾದ್ಯಂತ ಪೆಟ್ರೋಲ್‌, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಬುಧವಾರದ ವೇಳೆಗೆ ಬೆಲೆ ಗರಿಷ್ಟ ಮಟ್ಟಕ್ಕೆ ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 25 ಪೈಸೆ ಏರಿಕೆಯಾದರೆ, ಡೀಸೆಲ್‌ ಬೆಲೆಯಲ್ಲಿಯೂ 25 ಪೈಸೆ ಹೆಚ್ಚಾಗಿದೆ. ಈ ತಿಂಗಳಲ್ಲಿ ಏಳು ಬಾರಿ ಇಂಧನ ಬೆಲೆಯಲ್ಲಿ ಹೆಚ್ಚಳವಾಗಿದೆ.

ಕಳೆದವಾರ ಸತತ 4 ದಿನಗಳವರೆಗೆ ಪೆಟ್ರೋಲ್‌, ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿತ್ತು. ವಾರಾಂತ್ಯದಲ್ಲಿ ಬೆಲೆ ಸ್ಥಿರವಾಗಿತ್ತು. ಇದೀಗ ಸೋಮವಾರದಿಂದ ಮತ್ತೆ ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್‌, ಡೀಸೆಲ್ನ ಬೆಲೆ ಏರಿಕೆಯಾಗಿದೆ ಎಂದು ಸಂಬಂಧಪಟ್ಟ ಮೂಲಗಳು ತಿಳಿಸಿವೆ.

ಮಧ್ಯಪ್ರದೇಶದ ರಾಜಧಾನಿ ಭೂಪಾಲ್‌ನಲ್ಲಿ ಮೊದಲ ಬಾರಿಗೆ ಪೆಟ್ರೋಲ್‌ ಬೆಲೆ 100.8 ರೂ ದಾಟಿದರೆ, ಡೀಸೆಲ್‌ ಬೆಲೆ 90.95 ರೂ ಆಗಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ ಈಗ 92.05 ರೂ, ಡೀಸೆಲ್‌ ಬೆಲೆ 82.61 ರೂ ಆಗಿದೆ. ಕೋವಿಡ್‌ 2ನೇ ಅಲೆ ದೇಶದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ತೈಲ ಬೆಲೆ ಏರಿಕೆಯಿಂದ, ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಳವಾಗುತ್ತೆ. ಇದರ ಪರಿಣಾಮ ಸಾಮಾನ್ಯ ಜನರ ಮೇಲೆ ಬೀಳಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಈಗಿನ ಪೆಟ್ರೋಲ್‌, ಡೀಸೆಲ್‌ ದರ

ಮುಂಬೈ – ₹98.36 per litre –₹ 89.75 per litre

ಚೆನ್ನೈ – ₹93.84 per litre ₹87.49 per litre

ಕೋಲ್ಕತ್ತಾ – ₹92.16 per litre ₹85.45 per litre

ಪುಣೆ – ₹98.00 per litre ₹88.03 per litre

ಬೆಂಗಳೂರು – ₹95.11 per litre ₹87.57 per litre

ಹೈದರಬಾದ್ – ₹95.67 per litre ₹90.06 per litre

ಭೂಪಾಲ್ – ₹100.08 per litre ₹90.05 per litre

 

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...