ನವದೆಹಲಿ (New Delhi): ದೇಶಾದ್ಯಂತ ಇಂದಿನಿಂದ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆ ಲೀಟರ್ಗೆ 2 ರೂಪಾಯಿ ಇಳಿಕೆಯಾಗಿದೆ.
ಲೋಕಸಭೆ ಚುನಾವಣೆಗೆ (Loksabha Election) ಮುನ್ನ ಕೇಂದ್ರ ಸರ್ಕಾರ (Central Government) ದೇಶದ ಜನತೆಗೆ ಬೆಲೆ ಏರಿಕೆಯ ತತ್ತರದಿಂದ ಕೊಂಚ ನಿರಾಳತೆ ನೀಡಿದೆ.
ಇದರಿಂದ ಪೆಟ್ರೋಲ್ ಬೆಲೆ 99.94 ರೂಪಾಯಿ ಹಾಗೂ ಡೀಸೆಲ್ ಬೆಲೆ 85.89 ರೂಪಾಯಿಗೆ ಇಳಿಕೆ ಆಗಲಿದೆ.
ಬೆಲೆ ಇಳಿಕೆಯಿಂದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ಲೀಟರ್ಗೆ 94.72 ಮತ್ತು 87.62 ರೂಪಾಯಿಯಾಗಿದೆ. ಬೆಂಗಳೂರಿನಲ್ಲಿ (Bengaluru) ಪ್ರತಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಡೀಸೆಲ್ ಬೆಲೆ 87.89 ರೂಪಾಯಿ ಇದೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾರ್ಚ್ 8 ರಂದು ದೇಶದಲ್ಲಿ 14.2 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 100 ರೂಪಾಯಿ ಕಡಿತವನ್ನು ಘೋಷಿಸಿದ್ದರು.
#petrol #diesel #pricedown #loksabhaelection #oilcompanies