ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ ಬೆನ್ಲಲ್ಲೇ ಈ ರೀತಿಯ ದರ ಏರಿಕೆಯಾಗಿದೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್‌ಗೆ ರೂ.3ರಷ್ಟು ಹೆಚ್ಚಳ ಮಾಡಲಾಗಿದೆ. ನಾಲ್ಕು ವರ್ಷಗಳ ಬಳಿಕ ಸರ್ಕಾರಿ ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆಗೆ ಮುಂದಾಗಿರುವುದು ಜನತೆಗೆ ಮತ್ತೊಂದು ಬೆಲೆ ಶಾಕ್ ನೀಡಿದೆ.
ಇದನ್ನೂ ಓದಿ : ‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ
ಇನ್ನೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾದ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(CNG) ಬೆಲೆ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂ. ಏರಿಸಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ (Bengaluru) 1 ಕೆಜಿ ಸಿಎನ್‌ಜಿ ದರ 93 ರೂ.ಗೆ ಏರಿಕೆಯಾಗಿದೆ. ವಿವಿಧ ಭಾಗಗಳಲ್ಲಿ ಅಥವಾ ವಿತರಕರ (ಗ್ಯಾಸ್ ಕಂಪನಿಗಳು) ಆಧಾರದ ಮೇಲೆ ಬೆಲೆಯಲ್ಲಿ 30 ಪೈಸೆಯಿಂದ 1 ರೂ. ರವರೆಗೆ ವ್ಯತ್ಯಾಸ ಇರಲಿದೆ.






