ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿ ವಿಶ್ವಾಸಮತ ಸಾಬೀತುಪಡಿಸಿದ ಬೆನ್ನಲ್ಲೇ ಏಕನಾಥ್ ಶಿಂಧೆ ಜನತೆಗೆ ಭರ್ಜರಿ ಕೊಡುಗೆ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಯಾಗಿ ವಿಶ್ವಾಸಮತ ಸಾಬೀತುಪಡಿಸಿದ ಬೆನ್ನಲ್ಲೇ ಈ ವಿಷಯ ಘೋಷಿಸಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
