• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಷ್ಟವನ್ನು ನಾವೇ ಭರಿಸುತ್ತೇವೆಂದು ಪೆಟ್ರೋಲ್ ಬೆಲೆಯಲ್ಲಿ 3ರೂಪಾಯಿ ಕಡಿತಗೊಳಿಸಿದ ತಮಿಳುನಾಡು ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
August 13, 2021
in ದೇಶ
0
ನಷ್ಟವನ್ನು ನಾವೇ ಭರಿಸುತ್ತೇವೆಂದು ಪೆಟ್ರೋಲ್ ಬೆಲೆಯಲ್ಲಿ 3ರೂಪಾಯಿ ಕಡಿತಗೊಳಿಸಿದ ತಮಿಳುನಾಡು ಸರ್ಕಾರ
Share on WhatsAppShare on FacebookShare on Telegram

ತಮಿಳುನಾಡಿನ ಜನರಿಗೆ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ  3ರೂ ಇಳಿಸಿದೆ. ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಅವರು , ಶುಕ್ರವಾರ ರಾಜ್ಯ ಬಜೆಟ್ ಮಂಡಿಸುವಾಗ, ಪೆಟ್ರೋಲ್ ಬೆಲೆಯಲ್ಲಿ 3ರೂ ಕಡಿತ ಮಾಡಲಾಗಿದೆ ಮತ್ತು ಇದರಿಂದಾಗಿ ರಾಜ್ಯ ಸರ್ಕಾರಕ್ಕೆ 1 1,160 ಕೋಟಿ ನಷ್ಟವಾಗುತ್ತೆ ಎಂದು ಹೇಳಿದ್ದಾರೆ.

ADVERTISEMENT

ತಮಿಳುನಾಡಿನಲ್ಲಿ 2.6 ಕೋಟಿ ಜನರು ದ್ವಿಚಕ್ರ ವಾಹನಗಳನ್ನು ಬಳಸುತ್ತಾರೆ. ನಾವು ಪೆಟ್ರೋಲ್ ಬೆಲೆಯಲ್ಲಿ ₹ 3 ಕಡಿಮೆ ಮಾಡಿದ್ದೇವೆ ಮತ್ತು ನಾವು ಇದಕ್ಕಾಗಿ 1,160 ಕೋಟಿ ಮೀಸಲಿಟ್ಟಿದ್ದೇವೆ ಎಂದು ತ್ಯಾಗರಾಜನ್ ಹೇಳಿದ್ದಾರೆ.

ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಡಿ.ಎಂ.ಕೆ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ನೇತೃತ್ವದ ಸರ್ಕಾರ ಮಂಡಿಸಿದ ಮೊದಲ ಬಜೆಟ್ ಇದಾಗಿದೆ.

Tami Nadu has 2.6 crores of people who use two-wheelers. The state government reduces the price of petrol by Rs 3 per litre. Due to this, the state government will face a deficit of Rs 1,160 crores: Tamil Nadu Finance Minister P Thiaga Rajan, in State Assembly

— ANI (@ANI) August 13, 2021

ದೇಶಾದ್ಯಂತ ಇಂಧನ ಬೆಲೆಗಳು ಏರಿಕೆಯಾಗುತ್ತಿವೆ ಮತ್ತು ಹಲವಾರು ರಾಜ್ಯಗಳಲ್ಲಿ ₹ 100 ರ ಗಡಿಯನ್ನು ದಾಟಿದೆ, ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕಗಳ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ಕೇಂದ್ರ ಸರ್ಕಾರವು ಪ್ರತಿ ಲೀಟರ್ ಗೆ  32.90 ರೂ ಅಬಕಾರಿ ಸುಂಕ ವಿಧಿಸುತ್ತದೆ ಮತ್ತು ರಾಜ್ಯ ಸರ್ಕಾರಗಳು 22.80ರೂ ವ್ಯಾಟ್ ವಿಧಿಸುತ್ತವೆ. ಡೀಸೆಲ್ ಮೇಲೆ 31.80ರೂ ಕೇಂದ್ರ ಅಬಕಾರಿ  ಸುಂಕ ವಿಧಿಸಿತ್ತದೆ ಮತ್ತು ರಾಜ್ಯಸರ್ಕಾರಗಳು  13.04ರೂ ವ್ಯಾಟ್ಅನ್ನು ವಿಧಿಸುತ್ತವೆ.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರವನ್ನು  ಟೀಕಿಸುತ್ತಿರುವುದರ ನಡುವೆ ತಮಿಳುನಾಡು ಸರ್ಕಾರದ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. .

ಕರ್ನಾಟಕ ವಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕ ಸರ್ಕಾರವೂ ಕೂಡಾ ತಮಿಳುನಾಡು ಸರ್ಕಾರದ ಮಾದರಿಯನ್ನು ಅನುಸರಿಸಬೇಕೆಂದು ಒತ್ತಾಯಿಸಿದ್ದಾರೆ.

 ಲಕ್ಷಾಂತರ ಸಾಮಾನ್ಯ ಜನರಿಗೆ ಸಹಾಯವಾಗಲೆಂದು ತಮಿಳುನಾಡು ಸರ್ಕಾರ ಪೆಟ್ರೋಲ್‌ ಬೆಲೆಯಲ್ಲಿ 3 ರೂಪಾಯಿ ಕಡಿತಗೊಳಿಸಿದೆ. ಕರ್ನಾಟಕ ಸರ್ಕಾರ ಕೂಡಾ ಇದೇ ಮಾದರಿಯನ್ನು ಅನುಸರಿಸಬೇಕೆಂದು ಬಸವರಾಜ್‌ ಬೊಮ್ಮಾಯಿ ಅವರನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Tamil Nadu has cut the petrol price by Rs. 3 helping lakhs of common man.

I urge @CMofKarnataka Shri @BSBommai to follow the same & cut the price of both Petrol & Diesel in Karnataka.#PetrolDieselPrice pic.twitter.com/wxE3GOWBmy

— Siddaramaiah (@siddaramaiah) August 13, 2021
Tags: ಬಿಜೆಪಿಸಿದ್ದರಾಮಯ್ಯ
Previous Post

ಪ್ರಸ್ತುತ ರಾಜ್ಯ ರಾಜಕೀಯ ಪರಿಸ್ಥಿತಿ ಕುರಿತು ಚಿಂತಕ ಕೆ.ಪಿ.ಸುರೇಶ್ ಅವರ ಮಾತು

Next Post

ಉ.ಪ್ರ ವಿಧಾನಸಭಾ ಚುನಾವಣೆ 2022 : ಜಾತಿಗಣತಿಗೆ ಪ್ರತಿಪಕ್ಷಗಳ ಒತ್ತಾಯ ಏಕೆ?

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಉ.ಪ್ರ ವಿಧಾನಸಭಾ ಚುನಾವಣೆ 2022 : ಜಾತಿಗಣತಿಗೆ ಪ್ರತಿಪಕ್ಷಗಳ ಒತ್ತಾಯ ಏಕೆ?

ಉ.ಪ್ರ ವಿಧಾನಸಭಾ ಚುನಾವಣೆ 2022 : ಜಾತಿಗಣತಿಗೆ ಪ್ರತಿಪಕ್ಷಗಳ ಒತ್ತಾಯ ಏಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada