ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದ್ದು ಈ ಕುರಿತು ಪ್ರಧಾನಿ ಮೋದಿ ಅವರು, ಯಾವಾಗಲೂ ನಮಗೆ ‘ಜನರು ಮೊದಲು’ ಎಂದು ಹೇಳಿದ್ದಾರೆ.
ಹೌದು, ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 8 ರೂ.ಗಳಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 6 ರೂ.ಗಳಷ್ಟು ಕಡಿಮೆ ಮಾಡುತ್ತಿದ್ದೇವ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ ಮರುಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮಾಡಿ ಪ್ರತಿಕ್ರಿಹಿಸಿದ್ದಾರೆ.
ಪ್ರಧಾನಿ ಮೋದಿಯವರು ಕೂಡ ಈ ಬಗ್ಗೆ ಟ್ವಿಟ್‌ನಲ್ಲಿ, ಯಾವಾಗಲೂ ನಮಗೆ ‘ಜನರು ಮೊದಲು’. ಅವರು ಇಂದಿನ ನಿರ್ಧಾರಗಳು, ವಿಶೇಷವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿನ ಗಮನಾರ್ಹ ಕುಸಿತಕ್ಕೆ ಸಂಬಂಧಿಸಿದ ನಿರ್ಧಾರಗಳು ವಿವಿಧ ವಲಯಗಳ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರುತ್ತವೆ, ನಮ್ಮ ನಾಗರಿಕರಿಗೆ ಪರಿಹಾರವನ್ನು ಒದಗಿಸುತ್ತವೆ ಮತ್ತು ಮತ್ತಷ್ಟು ‘ಸುಲಭ ಜೀವನ’ವನ್ನು ಒದಗಿಸುತ್ತವೆ ಹೇಳಿದ್ದಾರೆ.
ಉಜ್ವಲ ಯೋಜನೆಯು ಕೋಟ್ಯಂತರ ಭಾರತೀಯರಿಗೆ, ವಿಶೇಷವಾಗಿ ಮಹಿಳೆಯರಿಗೆ ಸಹಾಯ ಮಾಡಿದೆ. ಉಜ್ವಲಾ ಸಬ್ಸಿಡಿಯ ಬಗ್ಗೆ ಇಂದಿನ ನಿರ್ಧಾರವು ಕುಟುಂಬದ ಬಜೆಟ್ ಅನ್ನು ಹೆಚ್ಚು ಸುಲಭಗೊಳಿಸುತ್ತದೆ ಅಂತ ಅವರು ಇದೇ ವೇಳೆ ಹೇಳಿದ್ದಾರೆ

ಸುಂಕ ಇಳಿಕೆ ಮತ್ತು ಸಬ್ಸಿಡಿ ಕುರಿತು ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಈ ವರ್ಷ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನಾವು ನೀಡಲಿದ್ದೇವೆ ಎಂದು ಹೇಳಿದ್ದಾರೆ.
ಪೆಟ್ರೋಲ್ ಮಾತ್ರವಲ್ಲದೇ ಇತರೆ ವಸ್ತುಗಳ ಬೆಲೆ ಕೂಡ ಇಳಿಕೆಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ ನಿರ್ಮಲಾ ಸೀತಾರಾಮನ್, ‘ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಮತ್ತು ಸಿಮೆಂಟ್ ಬೆಲೆಯನ್ನು ಕಡಿಮೆ ಮಾಡಲು ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಹ ನಾವು ಕಡಿಮೆ ಮಾಡುತ್ತಿದ್ದೇವೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುತ್ತದೆ. ಕೆಲವು ಉಕ್ಕು ಉತ್ಪನ್ನಗಳ ಮೇಲೆ ರಫ್ತು ಸುಂಕ ವಿಧಿಸಲಾಗುವುದು ಅಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.



