• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಿ.ಜಿ.ಆರ್ ಸಿಂಧ್ಯಾ ಅವರಿಂದ ಪ್ರಸಿದ್ಧ್ ನಿರ್ದೇಶನದ “ಶೇರ್” ಚಿತ್ರದ ಟೀಸರ್ ಅನಾವರಣ.

ಪ್ರತಿಧ್ವನಿ by ಪ್ರತಿಧ್ವನಿ
December 29, 2024
in Top Story, ಇತರೆ / Others, ಕರ್ನಾಟಕ
0
ಪಿ.ಜಿ.ಆರ್ ಸಿಂಧ್ಯಾ ಅವರಿಂದ ಪ್ರಸಿದ್ಧ್ ನಿರ್ದೇಶನದ “ಶೇರ್” ಚಿತ್ರದ ಟೀಸರ್ ಅನಾವರಣ.
Share on WhatsAppShare on FacebookShare on Telegram

ಸುದರ್ಶನ್ ಸುಂದರರಾಜ್ ನಿರ್ಮಾಣದ, ಪ್ರಸಿದ್ಧ್ ನಿರ್ದೇಶನದ ಹಾಗೂ “ಕನ್ನಡತಿ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ಶೇರ್” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಹಿರಿಯ ರಾಜಕೀಯ ಮುಖಂಡರಾದ ಪಿ.ಜಿ.ಆರ್ ಸಿಂಧ್ಯಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಚಿತ್ರದ ಮೂಲಕ ನಿರ್ಮಾಪಕ ಸುದರ್ಶನ್ ಸುಂದರರಾಜ್ ಅವರ ಪುತ್ರ ಕ್ರಿಸ್ ಖಳನಟನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ‌.

ADVERTISEMENT

ಟೀಸರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಪ್ರಸಿದ್ದ್, “ಶೇರ್” ನನ್ನ ನಿರ್ದೇಶನದ ಮೂರನೇ ಚಿತ್ರ. ನಾನು ನನ್ನ ಚಿತ್ರಗಳಲ್ಲಿ ಸಂದೇಶ ಕೊಡಲು ಇಷ್ಟ ಪಡುವುದಿಲ್ಲ. ಜನರಿಗೆ ಬೇಕಾಗಿರುವುದು ಮನೋರಂಜನೆ. ಅದನ್ನು ಕೊಡಲು ಪ್ರಯತ್ನ ಮಾಡುತ್ತೇನೆ. “ಶೇರ್” ಕೂಡ ಪಕ್ಕಾ ಎಂಟರ್ಟೈನ್ಮೆಂಟ್ ಚಿತ್ರ. ಅನಾಥಾಶ್ರಮದಲ್ಲಿ ಹೆಚ್ಚಿನ ಕಥೆ ನಡೆಯುತ್ತದೆ. ಅಲ್ಲೊಬ್ಬ ರಾಜಕಾರಣಿ ಇರುತ್ತಾನೆ. ಅಲ್ಲಿ ಎರಡು ಗುಂಪುಗಳಿರುತ್ತದೆ.ಒಂದು ಗುಂಪಿನವರು ಅನಾಥಾಶ್ರಮವನ್ನೇ ಅಡ್ಡ ಮಾಡಿಕೊಂಡಿರುತ್ತಾರೆ. ಅಲ್ಲೊಂದು ಒಳ್ಳೆಯ ಗುಂಪು ಸಹ ಇರುತ್ತದೆ. ನಾಯಕ-ನಾಯಕಿ ಅನಾಥರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಸದ್ಯ ಚಿತ್ರೀಕರಣ ಮುಗಿಸಿ,‌ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುವ ತಯಾರಿ‌ ನಡೆಯುತ್ತಿದೆ ಎಂದರು.

ನಾನು‌ ಮೂಲತಃ ಬೀದರ್ ನವನು. ಅಲ್ಲೇ ವಕೀಲನಾಗಿ ಕಾರ್ಯ ನಿರ್ವಿಸುತ್ತಿದ್ದೇನೆ. ರಾಜಕೀಯದಲ್ಲೂ ಇದ್ದೀನಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ನನ್ನ ಮಗ ಕ್ರಿಸ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾನೆ ಎಂದರು ನಿರ್ಮಾಪಕ ಸುದರ್ಶನ್ ಸುಂದರರಾಜ್.

ಮೊದಲ ಬಾರಿಗೆ ಖಳನಟನಾಗಿ ಅಭಿನಯಿಸಿದ್ದೇನೆ. ಎಲ್ಲರ ಪ್ರೋತ್ಸಾಹವಿರಲಿ ಎಂದರು ನಟ ಕ್ರಿಸ್.ಚಿತ್ರದ ನಾಯಕಿ ಸುರೇಖ ಹಾಗೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿರುವ ತನೀಶಾ ಕುಪ್ಪಂಡ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಿಟ್ಟಿ ಕೌಶಿಕ್ ಛಾಯಾಗ್ರಹಣದ ಬಗ್ಗೆ ಮಾಹಿತಿ ನೀಡಿದರು.

Tags: "Share" filmDirected by PGR ScindiaPGR ScindiaPGR Scindia unveiledProduced by Sudarshan Sundarrajserial "Kannadathi"Share"starring Kiran RajTeaser Unveiled
Previous Post

ಹೊಸವರ್ಷದ ಮೊದಲ ಚಿತ್ರವಾಗಿ ಜನವರಿ 3 ರಂದು ಬಿಡುಗಡೆಯಾಗಲಿದೆ “ಗನ್ಸ್ ಅಂಡ್ ರೋಸಸ್”

Next Post

ಭಾರತ ಎಂಬ ನಾವೆಯ ದಿಕ್ಕು ಬದಲಿಸಿದ ಮೇಧಾವಿ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಭಾರತ ಎಂಬ ನಾವೆಯ ದಿಕ್ಕು ಬದಲಿಸಿದ ಮೇಧಾವಿ

ಭಾರತ ಎಂಬ ನಾವೆಯ ದಿಕ್ಕು ಬದಲಿಸಿದ ಮೇಧಾವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada