ಕೋವಿಡ್ 2ನೇ ಅಲೆ ಹೆಚ್ಚಾದ ಕಾರಣ, ಕೋವಿಡ್ ನಿಯಂತ್ರಣ ಸಂಬಂಧ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಸಲಹೆ ಕೊಟ್ಟಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಜ್ಯಕ್ಕೆ ಸೇರಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರ ಕೇಂದ್ರಗಳನ್ನು ಕೋವಿಡ್ (ಕೋವಿಡ್ ಸೆಂಟರ್) ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ತಾತ್ಕಾಲಿಕವಾಗಿ ಬಳಸುವಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪಿ.ಜಿ ಆರ್ ಸಿಂಧ್ಯ ಪತ್ರ ಬರೆದಿದ್ದಾರೆ.