ಫೋಟೋಗೆ ಡಾಲಿ ಧನಂಜಯ್-ಲೂಸಿಯಾ ಪವನ್ ಸಾಥ್
ಬೆಂಗಳೂರು (Bengaluru): ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದುಕೊಂಡಿದ್ದ ಫೋಟೋ(Photo) ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ.
ನಟ ರಾಕ್ಷಸ ಡಾಲಿ ಧನಂಜಯ್ (Daali Dhananjay) ಹಾಗೂ ಲೂಸಿಯಾ ಖ್ಯಾತಿಯ ಪವನ್ ಕುಮಾರ್ (PavanKumar) ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.
ಶ್ರೀರಂಗಪಟ್ಟದಲ್ಲಿರುವ ಪ್ರಕಾಶ್ ರಾಜ್ (Prakash Raj) ಒಡೆತನದ ನಿರ್ದಿಗಂತ ಫಾರಂ ಹೌಸ್ ನಲ್ಲಿ ಫೋಟೋ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಬಹರಗಾರರು ಹಾಗೂ ಪತ್ರಕರ್ತರಾಗಿರುವ ಜೋಗಿ (Jogi), ಫೋಟೋ ಚಿತ್ರ ಪ್ರೆಸೆಂಟ್ ಮಾಡಿರುವ ಪ್ರಕಾಶ್ ರಾಜ್, ನಿರ್ದೇಶಕ ಉತ್ಸವ್ ಗೋನವಾರ ( utsav gonwar) ಸೇರಿದಂತೆ ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.
ಟ್ರೇಲರ್ ಬಿಡುಗಡೆ ಬಳಿಕ ಡಾಲಿ ಧನಂಜಯ್ ಮಾತನಾಡಿ, ಫೋಟೋ ಕಾಡುವ ಸಿನಿಮಾ. ಉತ್ಸವ್ ಅವರು ತುಂಬಾ ಚೆನ್ನಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ತುಂಬಾ ಖುಷಿ ವಿಚಾರ ಏನೆಂದರೆ ಇತ್ತೀಚೆಗೆ ಬರುತ್ತಿರುವ ಯುವ ನಿರ್ದೇಶಕರು ಒಳ್ಳೊಳ್ಳೆ ಸಿನಿಮಾಗಳನ್ನು ಬೇರೆ ಬೇರೆ ರೀತಿಯ ಸಿನಿಮಾಗಳನ್ನು ನಮ್ಮ ಕನ್ನಡದ ಜನಗಳ ಮುಂದಿಡುತ್ತಿದ್ದಾರೆ. ಅದು ತುಂಬಾ ಖುಷಿ ವಿಚಾರ. ಆ ರೀತಿಯ ಸಿನಿಮಾಗಳಿಗೆ ಒಬ್ಬೊಬ್ಬರು ಜೊತೆಯಾಗುತ್ತಿದ್ದಾರೆ. ಈ ಚಿತ್ರಕ್ಕೆ ಪ್ರಕಾಶ್ ರಾಜ್ ಸರ್ ಜೊತೆಯಾಗಿದ್ದಾರೆ. ನಾನು ಮೈಸೂರಿಗೆ ಬಂದಾಗ ಇಲ್ಲಿ ಎರಡು ಮೂರು ಬಾರಿ ಇಲ್ಲಿಗೆ ಬಂದಿದ್ದೇನೆ. ಒಂದು ಗುರಿ ಇಟ್ಕೊಂಡು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಹೇಗೆ ಟೈಮ್ ಆಗುತ್ತದೆಯೋ ಗೊತ್ತಿಲ್ಲ. ತೋಟಗಾರಿಕೆ, ರಂಗಭೂಮಿ ಎಲ್ಲವನ್ನೂ ತುಂಬಾ ಚೆನ್ನಾಗಿ ತೆಗೆದುಕೊಂಡು ಹೋಗುತ್ತಿದ್ದಾರೆ. ಉತ್ಸವ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.
ಪ್ರಕಾಶ್ ರಾಜ್ ಮಾತನಾಡಿ, ನಮ್ಮ ದೇಹಕ್ಕೆ ಆದ ಗಾಯಗಳು ಇದೆಯಲ್ಲ. ಅದು ಸುಮ್ಮನಿದ್ದರೂ ವಾಸಿಯಾಗುತ್ತದೆ. ಆದರೆ ಸಮಾಜಕ್ಕೆ ಆಗಿರುವ ಗಾಯ ಇದೆಯಲ್ಲ ನಾವು ಸುಮ್ಮನಿದಷ್ಟು ಜಾಸ್ತಿಯಾಗುತ್ತದೆ. ನನಗೆ ಉತ್ಸವ್ ಸಿನಿಮಾನಾ ಬಹಳ ದಿನಗಳಿಂದ ತೋರಿಸುವ ಆಸೆ ಇತ್ತು. ಬೇರೆ ಬೇರೆ ಕಾರಣಗಳಿಂದ ಬ್ಯುಸಿ ಇದ್ದೆ. ಸಿನಿಮಾ ನೋಡಿ ಆದ್ಮೇಲೆ 15 ರಿಂದ 20 ನಿಮಿಷ ಮಾತನಾಡಲು ಆಗಲಿಲ್ಲ. ಅಷ್ಟೂ ದುಃಖ ಬಂತು. ಲಾಕ್ ಡೌನ್ ಸಮಯದಲ್ಲಿ ನಾವೆಲ್ಲರೂ ನಮ್ಮ ನಮ್ಮ ಮನೆಗಳಲ್ಲಿ ಇದ್ದೆವು. ಇಡೀ ಪ್ರಪಂಚ ಲಾಕ್ ಡೌನ್ ಆಗಿದೆ ಎಲ್ಲಿ ಹೋಗುವುದು ಗೊತ್ತಿಲ್ಲ. ಹೋಗಲು ದಾರಿ ಗೊತ್ತಿಲ್ಲ. ಇದು ನಾವು ಲಾಕ್ ಡೌನ್ ನಲ್ಲಿ ನೋಡಿದ ನೈಜ ಸ್ಥಿತಿ ಇದು. ಲಾಕ್ ಡೌನ್ ಸಮಯದಲ್ಲಿ ಒಬ್ಬರು ಲಾರಿ, ಬಸ್ ತೆಗೆದುಕೊಂಡು ಹೋಗಿ ಅವರನ್ನು ಮನೆಗೆ ಯೋಚನೆ ಮಾಡಿಲ್ಲ. ಈ ನೋವುಗಳನ್ನು ದಾಖಲೆ ಮಾಡ್ಬೇಕು ಅಂತಾ 21 ವರ್ಷದ ಹುಡುಗನಿಗೆ ಅನಿಸಿದೆಯಲ್ಲ ಅದನ್ನು ಮೆಚ್ಚಬೇಕು. ನಾವು ಚಿತ್ರ ಮಾಡಲು ಆಗಲಿಲ್ಲ. ಈ ಚಿತ್ರಕ್ಕೆ ಬೆಂಬಲವಾಗಿ ನಿಲ್ಲೋಣಾ ಎಂದು ಇದನ್ನು ರಿಲೀಸ್ ಮಾಡಲು ನಿಂತೆವು ಎಂದರು.
ನಿರ್ದೇಶಕ ಉತ್ಸವ್ ಗೋನವಾರ ಮಾತನಾಡಿ, ಲಾಕ್ ಡೌನ್ ಗೂ ಮುಂಚೆ ನಾನು ಕೂರ್ಗ್ ಗೆ ಹೋಗಿದ್ದೆ. ಆ ಸಮಯದಲ್ಲೊಂದು ಆರ್ಟಿಕಲ್ ಓದಿದ್ದೆ. ಗಂಗಮ್ಮ ಎಂಬ ಗರ್ಭಿಣಿ ಬೆಂಗಳೂರಿಂದ ಊರಿಗೆ ಹೋಗಬೇಕಾದರೆ ಮಧ್ಯೆದಲ್ಲಿ ಮಲ್ಟಿ ಆರ್ಗನ್ ಡ್ಯಾಮೇಜ್ ಆಗಿ ಸತ್ತು ಹೋಗ್ತಾರೆ. ಬಳ್ಳಾರಿ ಹತ್ತಿರ. ಈ ಆರ್ಟಿಕಲ್ ತುಂಬಾ ಕಾಡಿತು. ಈ ವಿಷ್ಯ ಡಾಕ್ಯುಮೆಂಟ್ ಆಗಬೇಕು ಎಂದು ಅನಿಸಿತು. ಆಗ ಬರೆಯಲು ಶುರು ಮಾಡಿದೆ. ಆ ನಂತರ ಅದನ್ನು ಸಿನಿಮಾ ಮಾಡಿದೆ ಎಂದರು.
ಮಸಾರಿ ಟಾಕೀಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಫೋಟೋ ಸಿನಿಮಾದಲ್ಲಿ ಮಹಾದೇವ ಹಡಪದ್, ಸಂಧ್ಯಾ ಅರಕೆರೆ, ಜಹಾಂಗೀರ್, ವೀರೇಶ್ ಗೊನ್ವಾರ್ ನಟಿಸಿದ್ದಾರೆ. ಚಿತ್ರಕ್ಕೆ ದಿನೇಶ್ ದಿವಾಕರನ್ ಅವರು ಕ್ಯಾಮೆರಾ ಹಿಡಿದಿದ್ದು, ಮತ್ತು ರವಿ ಹಿರೇಮಠ್ ಹಿನ್ನೆಲೆ ಸಂಗೀತ, ಶಿವರಾಜ್ ಮೆಹೂ ಕತ್ತರಿ ಕೆಲಸ ಚಿತ್ರಕ್ಕಿದೆ. ಮಾರ್ಚ್ 15ಕ್ಕೆ ಎಲ್ಲರಿಂದ ಲೈಕ್ ಪಡೆಯೋದಿಕ್ಕೆ ಫೋಟೋ ತೆರೆಗೆ ಬರ್ತಿದೆ.
#karnataka #bengaluru #photo #sandalwood #cinema