ಬೆಂಗಳೂರು : ನಗರದ ಕೋಗಿಲು ಕ್ರಾಸ್ ಬಳಿಯ ಫಕೀರ್ ಕಾಲೋನಿ ಹಾಗೂ ವಸೀನ್ ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ಕೈಗೊಂಡ ರಾಜ್ಯ ಸರ್ಕಾರದ ವಿರುದ್ಧ ಕೇರಳ(Kerala) ಸಿಎಂ ಪಿಣರಾಯಿ ವಿಜಯನ್(Pinarayi Vijayan )ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಜೆಸಿಬಿ ಮೂಲಕ ಕೆಡವಲಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ “ಬುಲ್ಡೋಜರ್ ರಾಜ್”ನ ಕ್ರೂರ ಕ್ರಮವನ್ನು ಅನುಸರಿಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪಿಣರಾಯಿ ಕಿಡಿಕಾರಿದ್ದಾರೆ.

ದುಃಖಕರವೆಂದರೆ, ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕಾರ್ಯಗತಗೊಳಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಯ ಮತ್ತು ಕ್ರೂರತೆಯ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವೀಯತೆಯು ಮೊದಲು ನಾಶವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಕಪಟ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ಎಕ್ಸ್ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆ ನೀಡಿದ್ದಾರೆ.












