ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf amendment act) ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಸರ್ಕಾರ ಆದೇಶಿಸಿದ ಬೆನ್ನಲ್ಲೇ, ಕೆಲವು ಕಡೆಗಳಲ್ಲಿ ಈ ಕಾನೂನನ್ನು ಜಾರಿಗೆ ತರುವುದುನ್ನು ವಿರೋಧಿಸಿ ಮುಸ್ಲಿಂ ಸಮುದಾಯ (Muslim community) ತೀವ್ರ ಪ್ರತಿಭಟನೆಗೆ ಮುಂದಾಗಿದೆ. ಈ ಮಧ್ಯೆ ರಾಜ್ಯದಲ್ಲೂ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.

ಹೌದು, ಈಗಾಗಲೇ ಪಶ್ಚಿಮ ಬಂಗಾಳದಲ್ಲಿ (West bengal) ದೊಡ್ಡ ಪ್ರತಿಭಟನೆಗಳು ನಡೆದಿದ್ದು,ಈ ಪ್ರೊಟೆಸ್ಟ್ ಹಿಂಸಾಚಾರಕ್ಕೆ ತಿರುಗಿ ಮೂವರು ಸಾವನ್ನಪ್ಪಿದ್ದು ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಈ ಮಧ್ಯೆ ಗುಜರಾತ್ (Gujurat) ನಲ್ಲಿ ಕೂಡ ಮುಸ್ಲಿಂ ಸಮುದಾಯ ಪ್ರೊಟೆಸ್ಟ್ ನಡೆಸಿದೆ.

ಈ ಮಧ್ಯೆ ಮಂಗಳೂರಿನಲ್ಲಿ ಕೂಡ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಸಿದ್ಧತೆ ನಡೆಸಲಾಗ್ತಿದೆ. ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಸಂಯುಕ್ತ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ನೇತೃತ್ವದಲ್ಲಿ ಮುಸ್ಮಿಂ ಸಂಘಟನೆಗಳು ಸಿಎಎ – ಎನ್ ಆರ್ ಸಿ ವಿರುದ್ಧ ನಡೆದ ಹೋರಾಟ ಮಾದರಿಯಲ್ಲಿ ಹೋರಾಟಕ್ಕೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಹೀಗಾಗಿ ಏಪ್ರಿಲ್ 18 ರಂದು ಶುಕ್ರವಾರದ ನಮಾಜ್ ಬಳಿಕ ಎಲ್ಲಾ ಮಸೀದಿಗಳಲ್ಲಿ ಪ್ರತಿಭಟನೆ ನಡೆಸಲು ತಯಾರಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.