• Home
  • About Us
  • ಕರ್ನಾಟಕ
Tuesday, January 20, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

KREDL: ರೈತರ ನೆರವಿಗೆ ಕ್ರೆಡಲ್‌ನಿಂದ ʼಪಿಎಂ ಕುಸುಮ್‌ ಬಿʼ ಸಹಾಯವಾಣಿ ಕೇಂದ್ರ‌

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Top Story, ಕರ್ನಾಟಕ
0
KREDL: ರೈತರ ನೆರವಿಗೆ ಕ್ರೆಡಲ್‌ನಿಂದ ʼಪಿಎಂ ಕುಸುಮ್‌ ಬಿʼ ಸಹಾಯವಾಣಿ ಕೇಂದ್ರ‌
Share on WhatsAppShare on FacebookShare on Telegram

ಬೆಂಗಳೂರು: ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು(Karnataka Renewable Energy Development Limited) ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ.

ADVERTISEMENT
HD Kumaraswamy | ಶಾಮನೂರು ಶಿವಶಂಕರಪ್ಪ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

2025ರ ಡಿಸೆಂಬರ್‌ 23ರಿಂದ 2025ರ ಡಿಸೆಂಬರ್‌ 31ರವರೆಗೆ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಕುಸುಮ್‌ ಬಿ ಯೋಜನೆ ಕುರಿತಂತೆ ರೈತರು ತಮ್ಮ ಸಮಸ್ಯೆಗಳನ್ನು ದೂರವಾಣಿ ಕರೆಯ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ರಾಜ್ಯದ ಎಲ್ಲ ರೈತರು ಇದರ ನೆರವು ಪಡೆದುಕೊಳ್ಳಬಹುದಾಗಿದ್ದು, ಇದಕ್ಕಾಗಿ ಕ್ರೆಡಲ್‌ ಸಿಬ್ಬಂದಿ, ಪ್ರತಿದಿನ ಬೆಳಿಗ್ಗೆ 6.00 ರಿಂದ ರಾತ್ರಿ 9.00ರವರೆಗೆ ರಜೆ ಇಲ್ಲದೆ ಎರಡು ಪಾಳಿಗಳಲ್ಲಿ ಕೆಲಸ ನಿರ್ವಹಿಸಲಿದ್ದಾರೆ.

ಸಹಾಯವಾಣಿಯಲ್ಲಿ ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ ಅಡಿ ಸೋಲಾರ್‌ ಪಂಪ್‌ಸೆಟ್‌ ಹಾಕಿಸಿಕೊಳ್ಳುವ ಕುರಿತು ಮಾಹಿತಿ, ಆನ್‌ಲೈನ್ ಪಾವತಿ ಮತ್ತು ಇತರ ಸಂಬಂಧಿತ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ರೈತರು ಮಧ್ಯವರ್ತಿಗಳನ್ನು ಸಂಪರ್ಕಿಸದೆ ಸಹಾಯವಾಣಿಯ ಅಧಿಕೃತ ಫೋನ್ ಸಂಖ್ಯೆ 080-22202100 ಮತ್ತು 8095132100ಅನ್ನು ನೇರವಾಗಿ ಸಂಪರ್ಕಿಸಬಹುದು. ಸೋಲಾರ್‌ ವಿದ್ಯುತ್‌ ಚಾಲಿತ ನೀರಾವರಿ ಪಂಪ್‌ ಸೆಟ್‌ಗಾಗಿ ರೈತರು ತಮ್ಮ ಪಾಲಿನ ವಂತಿಗೆ ಹೊರತುಪಡಿಸಿ ಯಾರಿಗೂ ಹಣ ಪಾವತಿಸಬೇಕಾಗಿಲ್ಲ ಎಂದು ಕ್ರೆಡಲ್‌ ಪ್ರಕಟಣೆ ತಿಳಿಸಿದೆ.

Dr. H N Ravindra  K. J. George  : ಯುವ ರಾಜಕಾರಣಿಗಳು ಕೆ.ಜೆ ಜಾರ್ಜ್‌  ಅವರನ್ನು ನೋಡಿ ಕಲಿಯುವುದು ತುಂಬಾ ಇದೆ..!

ಪಿಎಂ ಕುಸುಮ್‌ ಬಿ ಯೋಜನೆಗೆ ರೈತ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, www.souramitra.com ಪೋರ್ಟಲ್‌ ಮೂಲಕ ಈವರೆಗೆ 83,204 ರೈತರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡವರು ಲಭ್ಯವಿರುವ ಆಯ್ಕೆಗಳಿಂದ ತಮ್ಮ ಆದ್ಯತೆಯ ಮಾರಾಟಗಾರರು ಅಥವಾ ಏಜೆನ್ಸಿಯನ್ನು ಆಯ್ಕೆ ಮಾಡಿಕೊಡು ತಮ್ಮ ಪಾಲಿನ ವಂತಿಗೆಯನ್ನು ಆನ್‌ಲೈನ್‌ ಮೂಲಕ ಪಾವತಿಸುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ.

ವಂತಿಗೆ ಪಾವತಿಗೆ 2025ರ ಡಿಸೆಂಬರ್‌ 31 ಕೊನೆಯ ದಿನಾಂಕ ಆಗಿದ್ದು, ಪ್ರಮುಖ ಪತ್ರಿಕೆಗಳಲ್ಲಿ ಜಾಹಿರಾತಿನ ಮೂಲಕ ಕ್ರೆಡಲ್‌ ಈ ವಿಷಯವನ್ನು ರೈತರ ಗಮನಕ್ಕೆ ತಂದಿದೆ. ಅಂತಿಮ ದಿನಾಂಕದೊಳಗೆ ಪಾವತಿ ಮಾಡಲು ವಿಫಲವಾದರೆ ಯೋಜನೆಗೆ ಅನರ್ಹರಾಗುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.

BY Vijayendra About election ;  ಜನ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ತಿರಸ್ಕರಿಸುತಿದ್ದಾರೆ #pratidhvani

ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ʼನೀರಾವರಿ ಪಂಪ್‌ಸೆಟ್‌ಗಳಿಗೆ ಸೌರಶಕ್ತಿಯನ್ನು ಕೈಗೆಟುಕುವ ದರಲ್ಲಿ ಒದಗಿಸುವ ಮೂಲಕ ರೈತರ ಸಬಲೀಕರಣಗೊಳಿಸುವುದು ಕುಸುಮ್‌ ಬಿ ಯೋಜನೆಯ ಮೂಲ ಉದ್ದೇಶವಾಗಿದೆ. ಸಹಾಯವಾಣಿಯನ್ನು ಸ್ಥಾಪಿಸುವ ಮೂಲಕ, ಅರ್ಜಿ ಸಲ್ಲಿಸಿರುವ ಅರ್ಹ ರೈತರಿಗೆ ಸಕಾಲಿಕ ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸಲಾಗುತ್ತದೆ. ಆನ್‌ಲೈನ್‌ ಅರ್ಜಿ ಸಲ್ಲಿಕೆ ವೇಳೆ ರೈತರು ಎದುರಿಸಬಹುದಾದ ಗೊಂದಲವನ್ನು ನೇರ ಸಂಪರ್ಕದಿಂದ ನಿವಾರಿಸಲಾಗುತ್ತದೆ. ಮಧ್ಯವರ್ತಿಗಳಿಲ್ಲದೆ ಯೋಜನೆ ಪ್ರಯೋಜನಗಳನ್ನು ಪಡೆಯಬಹುದು. ರೈತರ ಕಲ್ಯಾಣದ ಜತೆಗೆ ಕೃಷಿ ಕ್ಷೇತ್ರದಲ್ಲೂ ನವೀಕರಿಸಬಹುದಾದ ಇಂಧನದ ಬಳಕೆಯನ್ನು ಉತ್ತೇಜಿಸಲು ಸರ್ಕಾರ ಬದ್ಧವಾಗಿದೆʼ ಎಂದಿದ್ದಾರೆ.

DCM DK Shivakumar On  MGNREGA | ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ*ಸರ್ಕಾರ #pratidhvani

ಇನ್ನು ಈ ಬಗ್ಗೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ರೈತರಿಗಾಗಿಯೇ ತೆರೆದಿರುವ ಈ ಸಹಾಯವಾಣಿ ಸ್ಥಾಪನೆಯು ಪಿಎಂ ಕುಸುಮ್‌ ಬಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಇಂಧನ ಇಲಾಖೆಯ ಬದ್ಧತೆಗೆ ಸಾಕ್ಷಿಯಾಗಿದೆ. ರೈತರ ಗೊಂದಲ ಪರಿಹರಿಸಿ, ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಬಲಪಡಿಸುತ್ತದೆ. ಸುಸ್ಥಿರ ಇಂಧನ ಬಳಕೆ ಮತ್ತು ರೈತ ಕೇಂದ್ರಿತ ಯೋಜನೆಗಳನ್ನು ಸಾಕಾರಗೊಳಿಸಲು ಸಿಬ್ಬಂದಿ ಜೊತೆ ಕೃಷಿಕರು ಸಹಕರಿಸಬೇಕುʼ ಎಂದಿದ್ದಾರೆ.

DK Shivakumar- Satish Jarkiholi: ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಕೆ, ಸತೀಶ್ ಭಾಗಿ #pratidhvani

ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದುʼ ಪಿಎಂ ಕುಸುಮ್‌ ಬಿ ಯೋಜನೆಯ ಅನುಷ್ಠಾನದ ಈ ನಿರ್ಣಾಯಕ ಹಂತದಲ್ಲಿ ರೈತರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ನಮ್ಮ ಸಮರ್ಪಿತ ತಂಡವು ತಾಂತ್ರಿಕ ಸಮಸ್ಯೆಗಳು, ಪಾವತಿ-ಸಂಬಂಧಿತ ಗೊಂದಲಗಳು ಮತ್ತು ಅರ್ಜಿ ಕುರಿತ ಯಾವುದೇ ಅನುಮಾನಗಳನ್ನು ಪರಿಹರಿಸಲು ದಿನದ 24 ಗಂಟೆಯೂ ಕೆಲಸ ಮಾಡುತ್ತಿದೆ. ರೈತರು ಮಾಹಿತಿ ಕೊರತೆ ಅಥವಾ ಕಾರ್ಯವಿಧಾನದ ತೊಡಕಿನಿಂದ ಯೋಜನೆಯ ಲಾಭದಿಂದ ವಂಚಿತರಾಗದಂತೆ ನೋಡಿಕೊಳ್ಳಲಾಗುವುದುʼ ಎಂದಿದ್ದಾರೆ.

JDS MLA Ravikumar Respect CM Siddaramaiah : ದುಡ್ಡಿಲ್ಲ ಎನ್ನುವ ಬಿಜೆಪಿಗೆ ಇದಕ್ಕೆಲ್ಲಾ ಹಣ ಎಲ್ಲಿಂದ ಬಂತು..?

ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ

ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಈ ಪ್ರಧಾನ ಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ್ ಮಹಾಭಿಯಾನ್ (ಕುಸುಮ್‌) ರೂಪಿಸಲಾಗಿದೆ.

Minister Santosh lad Receives Award | ಜೀವ ರಕ್ಷಕ ಪ್ರಶಸ್ತಿ ಸ್ವೀಕರಿಸಿದ ಸಚಿವ ಸಂತೋಷ್ ಲಾಡ್..! #santhoshlad

ಕುಸುಮ್‌ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವು ಸಬ್ಸಿಡಿ ಮೊತ್ತವನ್ನು ಶೇ.30ರಿಂದ 50ಕ್ಕೆ ಏರಿಸಿದೆ. ಕೇಂದ್ರ ಸರ್ಕಾರ ಶೇ.30ರಷ್ಟು ಸಬ್ಸಿಡಿ ಒದಗಿಸುತ್ತಿದ್ದು,ರೈತರು ಪಾವತಿಸಬೇಕಿರುವುದು ಶೇ.20ರಷ್ಟು ಮಾತ್ರ. ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್‌ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೋಲಾರ್ ಪಂಪ್‌ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ.

CM Siddaramaiah: Unveiled 17th Film Festival Flag |ಸಿಎಂ ಸಿದ್ದರಾಮಯ್ಯರಿಂದ ಚಲನಚಿತ್ರೋತ್ಸವದ ಧ್ವಜ ಅನಾವರಣ.!

ಸೌರ ಪಂಪ್‌ಸೆಟ್‌ಗಳ ಸ್ಥಾಪನೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದೆ. ಸೌರ ಪಂಪ್‌ಸೆಟ್‌ ಬಳಕೆಯಿಂದ 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ವಿದ್ಯುತ್ ಪೂರೈಕೆಯಾಗಲಿದೆ.

Tags: bengaluruFarmerhelplineKarnatakaKREDL
Previous Post

ವಿಜಯಲಕ್ಷ್ಮಿಗೆ ಕೇಸ್: ಕೆಟ್ಟ ಕಾಮೆಂಟ್ ಹಾಕಿದವರಿಗೆ ಬಂಧನದ ಭೀತಿ

Next Post

ಮೈಸೂರು ಅರಮನೆ ಬಳಿ ಸಿಲಿಂಡರ್‌ ಸ್ಫೋ*: ವ್ಯಾಪಾರಿ ಸಾ**, ಹಲವರಿಗೆ ಗಾಯ

Related Posts

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
0

ಬೆಂಗಳೂರು: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ರೆನ್ಯೂ...

Read moreDetails
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
Next Post
ಮೈಸೂರು ಅರಮನೆ ಬಳಿ ಸಿಲಿಂಡರ್‌ ಸ್ಫೋ*: ವ್ಯಾಪಾರಿ ಸಾ**, ಹಲವರಿಗೆ ಗಾಯ

ಮೈಸೂರು ಅರಮನೆ ಬಳಿ ಸಿಲಿಂಡರ್‌ ಸ್ಫೋ*: ವ್ಯಾಪಾರಿ ಸಾ**, ಹಲವರಿಗೆ ಗಾಯ

Recent News

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!