ಕೆನಡಾದಲ್ಲಿ (Canada) ಹಿಂದೂಗಳ (Hindu) ಮೇಲೆ ನಡೆಯುತ್ತಿರುವ ದಾಳಿಯ ಕುರಿತು ಮೊದಲಬಾರಿಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Pm modi) ತೀವ್ರವಾಗಿ ಖಂಡಿಸಿದ್ದಾರೆ.
ಈ ರೀತಿಯ ಹಿಂಸಾಚಾರವನ್ನ ದೇಶದಲ್ಲಿ ಭಾರತೀಯ ರಾಜತಾಂತ್ರಿಕರನ್ನ ಬೆದರಿಸುವ ಹೇಡಿತನದ ಪ್ರಯತ್ನ ಎಂದು ಬಣ್ಣಿಸಿದ್ದಾರೆ. ಇದರೊಂದಿಗೆ ಭಾರತೀಯರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ತಮ್ಮ ಮೊದಲ ಹೇಳಿಕೆಯನ್ನ ನೀಡಿದ್ದಾರೆ.
ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ಉದ್ದೇಶಪೂರ್ವಕ ದಾಳಿಯನ್ನ ನಾನು ಬಲವಾಗಿ ಖಂಡಿಸುತ್ತೇನೆ. ನಮ್ಮ ರಾಜತಾಂತ್ರಿಕರನ್ನ ಬೆದರಿಸುವ ಹೇಡಿತನದ ಪ್ರಯತ್ನಗಳು ಅಷ್ಟೇ ಭಯಾನಕವಾಗಿದೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನ ಎಂದಿಗೂ ದುರ್ಬಲಗೊಳಿಸುವುದಿಲ್ಲ ಎಂದು ಪ್ರಧಾನ ಮಂತ್ರಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.