• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ ಶಿಕ್ಷಣ ಸರಿಯಾಗಿದ್ದಿದ್ದರೆ ವಿದೇಶಕ್ಕೆ ಹೋಗ್ತಿರಲಿಲ್ಲ : ಇದಕ್ಕೆಲ್ಲ ಹಿಂದಿನ ಸರ್ಕಾರವೇ ಕಾರಣ : PM ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
March 4, 2022
in ದೇಶ
0
ಮೋದಿ ರಾಜಕೀಯ ಭಾಷಣವನ್ನು ಟ್ವೀಟ್ ಮಾಡುವ ಮೂಲಕ ಬಿಜೆಪಿ ಗುಲಾಮಗಿರಿಗೆ ಬಿತ್ತೇ PMO?
Share on WhatsAppShare on FacebookShare on Telegram

ADVERTISEMENT

ವೈದ್ಯಕೀಯ ಶಿಕ್ಷಣ (Medical Education) ಪಡೆಯಲು ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು (Indian Students) ವಿದೇಶಕ್ಕೆ ಹೋಗುತ್ತಿರುವುದಕ್ಕೆ ಹಿಂದಿನ ಸರ್ಕಾರಗಳು ಕಾರಣವೆಂದು ಪ್ರಧಾನಿ ನರೇಂದ್ರ ಮೋದಿ (PM Narendra modi) ಆರೋಪಿಸಿದ್ದಾರೆ. ತಮ್ಮ ಸರ್ಕಾರವು ಹಿಂದಿನ ಪ್ರಮಾದಗಳನ್ನು ಸರಿಪಡಿಸುತ್ತಿದೆ, ವೈದ್ಯಕೀಯ ಕಾಲೇಜುಗಳ (Medical College) ಸಂಖ್ಯೆಯನ್ನು ಹೆಚ್ಚಿಸಲು ಕೆಲಸ ಮಾಡುತ್ತಿದೆ, ಇದರಿಂದಾಗಿ ವಿದ್ಯಾರ್ಥಿಗಳು ದೇಶದೊಳಗೆ ವೈದ್ಯಕೀಯ ಸೀಟುಗಳನ್ನು ಪಡೆಯಬಹುದು ಎಂದು ಪ್ರತಿಪಾದಿಸಿದ್ದಾರೆ.

ಯುದ್ಧ ಪೀಡಿತ ಉಕ್ರೇನ್‌ನಿಂದ (Ukraine) ಹಿಂದಿರುಗಿದ ಉತ್ತರ ಪ್ರದೇಶದ (Uttar Pradesh) ವಿವಿಧ ಭಾಗಗಳ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಮೋಸಿ, ʼಉಕ್ರೇನ್‌ನಲ್ಲಿ ಕಷ್ಟಗಳನ್ನು ಎದುರಿಸಿದ ಬಳಿಕ ತಮ್ಮ ಕೋಪವನ್ನು ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಪ್ರಧಾನೊ ಮೋದಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.

ಈ ಬಿಕ್ಕಟ್ಟಿನಲ್ಲಿ ಅವರು ಕೋಪಗೊಳ್ಳುವುದು ಸಹಜ ಎಂದು ನಾನು ಭಾವಿಸುತ್ತೇನೆ. ರಷ್ಯಾದಿಂದ ದಾಳಿಗೊಳಗಾದ ಉಕ್ರೇನ್‌ನಿಂದ ಭಾರತೀಯ ನಾಗರಿಕರನ್ನು, ವಿದ್ಯಾರ್ಥಿಗಳನ್ನು ಕರೆತರಲು ಸರ್ಕಾರ “ಆಪರೇಷನ್ ಗಂಗಾ” (Operation Ganga) ಪ್ರಾರಂಭಿಸಿದೆ. ಅವರು ಇನ್ನು ಮುಂದೆ ಉದ್ರೇಕಗೊಳ್ಳದೆ ಕಾರ್ಯಾಚರಣೆಯ ವಿಸ್ತಾರವನ್ನು ಅರ್ಥಮಾಡಿಕೊಂಡಾಗ, ಅವರು ತಮ್ಮ ವಾತ್ಸಲ್ಯವನ್ನು ತೋರಿಸುತ್ತಾರೆ ಎಂದು ಪ್ರಧಾನಿ ಹೇಳಿದ್ದಾರೆ.

“ವೈದ್ಯಕೀಯ ಶಿಕ್ಷಣ ನೀತಿಗಳು ಮೊದಲೇ ಸರಿಯಾಗಿದ್ದರೆ, ನೀವು ವಿದೇಶಕ್ಕೆ ಹೋಗಬೇಕಾಗಿರಲಿಲ್ಲ, ಯಾವುದೇ ಪೋಷಕರು ತಮ್ಮ ಚಿಕ್ಕ ವಯಸ್ಸಿನಲ್ಲಿ ತಮ್ಮ ಮಕ್ಕಳು ವಿದೇಶಕ್ಕೆ ಹೋಗಬೇಕೆಂದು ಬಯಸುವುದಿಲ್ಲ” ಎಂದು ಮೋದಿ ಹೇಳಿದ್ದಾರೆ.

ತಮ್ಮ ಸರ್ಕಾರ ಹಿಂದಿನ ತಪ್ಪುಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದು, ಮೊದಲು 300 ರಿಂದ 400 ವೈದ್ಯಕೀಯ ಕಾಲೇಜುಗಳಿದ್ದವು. ಈಗ ಅವು ಸುಮಾರು 700 ಇವೆ. ಈ ಹಿಂದೆ 80,000-90,000 ಸೀಟುಗಳು ಲಭ್ಯವಿದ್ದವು, ಈಗ ಅವು 1.5 ಲಕ್ಷಕ್ಕೆ ಏರಿದೆ ಎಂದು ಅವರು ಹೇಳಿದ್ದಾರೆ.

“ಪ್ರತಿ ಜಿಲ್ಲೆಗೆ ಒಂದು ವೈದ್ಯಕೀಯ ಕಾಲೇಜು ನಿರ್ಮಿಸುವುದು ನನ್ನ ಗುರಿ. ಬಹುಶಃ, ಕಳೆದ 70 ವರ್ಷಗಳಲ್ಲಿ ಉಂಟಾದ ವೈದ್ಯರಿಗಿಂತ ಹೆಚ್ಚು ವೈದ್ಯರು 10 ವರ್ಷಗಳಲ್ಲಿ ಉತ್ಪಾದನೆಯಾಗುತ್ತಾರೆ,” ಎಂದು ಅವರು ಹೇಳಿದ್ದಾರೆ.

ಯುವ ವಿದ್ಯಾರ್ಥಿಗಳು ವಿದೇಶಕ್ಕೆ ಪ್ರಯಾಣಿಸಬೇಕಾಗಿಲ್ಲ ಮತ್ತು ಅವರ ಕುಟುಂಬಗಳು ಅಂತಹ ಒತ್ತಡಕ್ಕೆ ಒಳಗಾಗಬೇಕಾಗಿಲ್ಲವಾದ್ದರಿಂದ ಇದು ಸಾಧಾರಣ ವಿಷಯವಲ್ಲ ಎಂದು ಅವರು ಹೇಳಿದ್ದಾರೆ.

“ಇಷ್ಟು ಚಿಕ್ಕ ವಯಸ್ಸಿನಲ್ಲಿ ನೀವು ದೂರದ ಸ್ಥಳದಲ್ಲಿ ಒಬ್ಬಂಟಿಯಾಗಿ ಜೀವನದಲ್ಲಿ ಇಂತಹ ಅನುಭವವನ್ನು ಅನುಭವಿಸಬೇಕಾಯಿತು. ನೀವು ಅನುಭವಿಸಿದ ಮಾನಸಿಕ ಸ್ಥಿತಿಯನ್ನು ನಾನು ಊಹಿಸಬಲ್ಲೆ. ಈಗ ನಾವು ಜನರನ್ನು ಸರಿಯಾಗಿ ಸ್ಥಳಾಂತರಿಸಲು ಸಮರ್ಥರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಚಾರದ ಭಾಗವಾಗಿ ಉತ್ತರಪ್ರದೇಶ ರಾಜ್ಯ ಪ್ರವಾಸದಲ್ಲಿರುವ ಮೋದಿ ಜೊತೆಗೆ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಅನುಭವವನ್ನು ಹಂಚಿಕೊಂಡ ಕೆಲವು ವಿದ್ಯಾರ್ಥಿಗಳು, ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಿದ ನಂತರ ಅವರು ಎಲ್ಲಾ ಭರವಸೆಗಳನ್ನು ತೊರೆದಿದ್ದಾರೆ ಮತ್ತು ಸರ್ಕಾರದ ಬೆಂಬಲವಿಲ್ಲದೆ ಹಿಂತಿರುಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನು ಕೆಲವು ವಿದ್ಯಾರ್ಥಿಗಳು ತಾವು ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ ಮತ್ತು ಅಲ್ಲಿನ ಭಾರತೀಯ ರಾಯಭಾರಿ ಕಚೇರಿಯಿಂದ ಸಾಕಷ್ಟು ಸೌಲಭ್ಯಗಳನ್ನು ಪಡೆದಿದ್ದೇವೆ ಎಂದು ಹೇಳಿದ್ದಾರೆ.

“ದಾಳಿ ಪ್ರಾರಂಭವಾದ ನಂತರ, ನಾನು ಹಿಂತಿರುಗಲು ಸಾಧ್ಯವಿಲ್ಲ ಎಂದು ತೋರುತ್ತಿದೆ, ಹತ್ತಿರದಿಂದ ಸಾವನ್ನು ನೋಡಿದೆ. ನಾನು ಭಾರತೀಯ ಮತ್ತು ನೀವು ನಮ್ಮ ಪ್ರಧಾನಿಯಾಗಿರುವುದಕ್ಕೆ ಹೆಮ್ಮೆಪಡುತ್ತೇನೆ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

Tags: BJPCongress PartyCovid 19Indian StudentsMedical CollegeMedical EducationOperation GangaPM Narendra ModiUkraineUttar Pradeshಆಪರೇಷನ್ ಗಂಗಾಉಕ್ರೇನ್‌ಉತ್ತರ ಪ್ರದೇಶದನರೇಂದ್ರ ಮೋದಿಪ್ರಧಾನಿ ನರೇಂದ್ರ ಮೋದಿಬಿಜೆಪಿಭಾರತೀಯ ವಿದ್ಯಾರ್ಥಿಗಳುವೈದ್ಯಕೀಯ ಕಾಲೇಜುವೈದ್ಯಕೀಯ ಶಿಕ್ಷಣ
Previous Post

ಇಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ : ಬೆಂಗಳೂರಿನ ನಿರೀಕ್ಷೆ ಹಲವು!

Next Post

ರಷ್ಯಾ ಉಕ್ರೇನ್ ಬಿಕ್ಕಟ್ಟು | ‘ನಾವು ಸತ್ತ ನಂತರ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಾರೆಯೇ?’ : ಭಾರತೀಯ ವಿದ್ಯಾರ್ಥಿ

Related Posts

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
0

ನವದೆಹಲಿ: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ನಾಯಕರು ನವದೆಹಲಿಯ ರಾಜ್ ಘಾಟ್‌ನಲ್ಲಿರುವ ಶಕ್ತಿ ಸ್ಥಳಕ್ಕೆ ಭೇಟಿ ನೀಡಿದರು....

Read moreDetails

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
Next Post
ರಷ್ಯಾ ಉಕ್ರೇನ್ ಬಿಕ್ಕಟ್ಟು | ‘ನಾವು ಸತ್ತ ನಂತರ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಾರೆಯೇ?’ : ಭಾರತೀಯ ವಿದ್ಯಾರ್ಥಿ

ರಷ್ಯಾ ಉಕ್ರೇನ್ ಬಿಕ್ಕಟ್ಟು | 'ನಾವು ಸತ್ತ ನಂತರ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಾರೆಯೇ?' : ಭಾರತೀಯ ವಿದ್ಯಾರ್ಥಿ

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada