ಕೇಂದ್ರ ಬಜೆಟ್ ಮಂಡನೆಯಾದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತದ ಮಹತ್ವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ.
ದೆಹಲಿಯ ಅಂಬೇಡ್ಕರ್ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪರದೆ ಹಾಕಿ ಆನ್‌ಲೈನ್ ಮೂಲಕ ಪ್ರಸಾರ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಜಿಲ್ಲಾ ಕೇಂದ್ರದಲ್ಲಿ 150ಕ್ಕೂ ಹೆಚ್ಚು ಕಾರ್ಯಕರ್ತರು, ಸಂಸದರು, ಶಾಸಕರು, ಸಚಿವರು, ಆರ್ಥಿಕ ತಜ್ಞರೂ ಭಾಗವಹಿಸಲಿದ್ದಾರೆ