ನವದೆಹಲಿ : ಒಡಿಶಾದ (Odisha) ಬಾಲಸೋರ್ ರೈಲು ದುರಂತ ಪ್ರಕರಣಕ್ಕೆ (Three-Train Accident) ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ರೈಲು ದುರಂತದ ಬಗ್ಗೆ ಅಧಿಕಾರಿಗಳಿಂದ ಪ್ರಧಾನಿ ಮೋದಿ (PM MODI) ಹಾಗೂ ಗೃಹ ಸಚಿವ ಅಮಿತ್ ಶಾ (AMITH SHAH) ಮಾಹಿತಿ ಪಡೆದರು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೇ ಸಚಿವಾಲಯ ಮುಖ್ಯಸ್ಥರು ಉಪಸ್ಥಿತರಿದ್ದರು.



ಒಡಿಶಾದ ಬಾಲಸೋರ್ ನಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.











