ಪ್ರಧಾನಿ ನರೇಂದ್ರ ಮೋದಿ ತಮ್ಮ 72ನೇ ಜನ್ಮದಿನವಾದ ಇಂದು ನಮೀಬಿಯಾದಿಂದ ಆಮದು ಮಾಡಿಕೊಳ್ಳಲಾದ 8 ಚೀತಾಗಳನ್ನು ಕಾಡಿಗೆ ಬಿಡುಗಡೆ ಮಾಡಿದರು.
ಕಳೆದ 7 ದಶಕಗಳಲ್ಲಿ ಭಾರತದಲ್ಲಿ ನಶಿಸಿ ಹೋಗಿದ್ದ ಚೀತಾಗಳನ್ನು(Cheetah) ಶನಿವಾರ ನಮೀಬಿಯಾದಿಂದ (Namibia) ಭಾರತಕ್ಕೆ ತರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ 8 ಚೀತಾಗಳನ್ನು ಮಧ್ಯಪ್ರದೇಶದ (Madhya Pradesh) ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದರು.
ಇಂದು ಬೆಳಗ್ಗೆ ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾದ 8 ವನ್ಯಜೀವಿ ಅತಿಥಿಗಳನ್ನು ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಗ್ವಾಲಿಯರ್ ಏರ್ ಫೋರ್ಸ್ ಸ್ಟೇಷನ್ನಿಂದ ಕುನ್ಹೋ ರಾಷ್ಟ್ರೀ ಯ ಉದ್ಯಾನವನಕ್ಕೆ ತರಲಾಗಿದೆ.
ನಮೀಬಿಯಾದಿಂದ ತರಲಾದ 8 ಚೀತಾಗಳಲ್ಲಿ 3 ಗಂಡು ಹಾಗೂ 5 ಹೆಣ್ಣು ಚೀತಾಗಳಿವೆ. ಇವು 2 ರಿಂದ 6 ವರ್ಷ ಆಸುಪಾಸಿನದ್ದಾಗಿವೆ.
ಮಚ್ಚೆ ಗುರುತಿನ ಚೀತಾಗಳ ಸಂತತಿ ಭಾರತದಲ್ಲಿ 70 ವರ್ಷ ಹಿಂದೆಯೇ ನಾಶವಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು.
ಇದೀಗ 75 ವರ್ಷಗಳ ಬಳಿಕ ಭಾರತಕ್ಕೆ ಚೀತಾಗಳು ಬಂದಿವೆ. ಈ ಚೀತಾಗಳಿಗೆ ಕುನ್ಹೋ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ.