ಜಾತಿ ತಾರತಮ್ಯದ ವಿರುದ್ಧದ ಹೋರಾಟದಲ್ಲಿ ಕೇರಳದ ಸಂತ ಮತ್ತು ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಕೊಡುಗೆ ಅಪಾರ ಎಂದು ಮಂಗಳವಾರ (ಏಪ್ರಿಲ್ 26) ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ಧಾರೆ.
ಶಿವಗಿರಿ ತೀರ್ಥೋದ್ಭವದ 90ನೇ ವಾರ್ಷಿಕೋತ್ಸವ ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದ ವರ್ಷಾವಧಿಯ ಜಂಟಿ ಆಚರಣೆಗಳ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಜನರು ಶ್ರೀ ನಾರಾಯಣ ಗುರುಗಳ ಬೋಧನೆಗಳು ಮತ್ತು ‘ಒಂದು ಜಾತಿ, ಒಂದು ಧರ್ಮ ಮತ್ತು ಒಂದೇ ದೇವರು’ ಎಂಬ ಸಂದೇಶವನ್ನು ಅನುಸರಿಸಿದರೆ, ಜಗತ್ತಿನ ಯಾವುದೇ ಶಕ್ತಿಯು ದೇಶವನ್ನು ವಿಭಜಿಸಲು ಸಾಧ್ಯವಾಗುವುದಿಲ್ಲ” ಮತ್ತು ಶ್ರೀ ನಾರಾಯಣ ಗುರುಗಳ ತತ್ವಶಾಸ್ತ್ರದ ತಿರುಳಲ್ಲಿ ‘ಆತ್ಮನಿರ್ಭರ ಭಾರತ್’ ಎಂದು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಕಾರ್ಯಕ್ರಮದಲ್ಲಿ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಮತ್ತು ಕೇಂದ್ರ ವಾಣಿಜ್ಯೋದ್ಯಮ, ಕೌಶಲ್ಯಾಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಭಾಗವಹಿಸಿದ್ದರು. ದೆಹಲಿಯ ಶ್ರೀ ನಾರಾಯಣ ಧರ್ಮ ಸಂಘಮ್ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮವು ಭಾರತದ ಪ್ರಧಾನ ಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆಯಿತು.