ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟಂಬರ್ 1-2ರಂದು ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಕೊಚ್ಚಿನ್‍ನಲ್ಲಿ ದೇಶಿ ನಿರ್ಮಿತ ಐಎನ್‍ಎಸ್ ವಿಕ್ರಾಂತ್ ಯುದ್ಧ ವಿಮಾನಗಳನ್ನು ಹೊತ್ತೊಯ್ಯಬಲ್ಲ ಹಡಗನ್ನು ಸೇನೆಗೆ ಸಮರ್ಪಿಸಲಿದ್ದಾರೆ. ಇದೇ ವೇಳೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸೆಪ್ಟೆಂಬರ್ 1 ರಂದು ಸಂಜೆ 6 ಗಂಟೆಗೆ ಕೊಚ್ಚಿನ್ ವಿಮಾನ ನಿಲ್ದಾಣದ ಬಳಿಯ ಕಾಲಡಿ ಗ್ರಾಮದಲ್ಲಿರುವ ಆದಿ ಶಂಕರಾಚಾರ್ಯರ ಪವಿತ್ರ ಜನ್ಮಸ್ಥಳವಾದ ಶ್ರೀ ಆದಿಶಂಕರ ಜನ್ಮ ಭೂಮಿ ಕ್ಷೇತ್ರಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ.

ಸೆಪ್ಟೆಂಬರ್ 2 ರಂದು ಬೆಳಿಗ್ಗೆ 9.30 ಕ್ಕೆ ಸಾರ್ವಜನಿಕ ಉದ್ದಿಮೆಯಾದ ಕೇರಳದ ಕೊಚ್ಚಿನ್ ಸಿಪ್‍ಯಾರ್ಡ್ ಲಿಮಿಟೆಡ್ ನಿರ್ಮಿಸಿರುವ ದೇಶಿ ನಿರ್ಮಿತ ಹಡಗನ್ನು ಸೇವೆಗೆ ಸಮರ್ಪಿಸಲಾಗುತ್ತಿದೆ. ನಂತರ ಮಧ್ಯಾಹ್ನ 1.30 ಗಂಟೆಗೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಮಂಗಳವಾರ ಪಿಎಂಒಗೆ ಮಾಹಿತಿ ನೀಡಿದರು.










