• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿ ಮೋದಿ ಅವರೇ ಬೆಂಗಳೂರಿನ ರಸ್ತೆ ಗುಂಡಿ ನೋಡಬನ್ನಿ : ಎಎಪಿ

Any Mind by Any Mind
June 14, 2022
in ಕರ್ನಾಟಕ
0
ಪ್ರಧಾನಿ ಮೋದಿ ಅವರೇ ಬೆಂಗಳೂರಿನ ರಸ್ತೆ ಗುಂಡಿ ನೋಡಬನ್ನಿ : ಎಎಪಿ
Share on WhatsAppShare on FacebookShare on Telegram

ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೂ ಆಗಮಿಸಿ, ರಸ್ತೆಗುಂಡಿಗಳನ್ನು ವೀಕ್ಷಿಸಬೇಕೆಂದು ಆಗ್ರಹಿಸಲು ಆಮ್‌ ಆದ್ಮಿ ಪಾರ್ಟಿಯು ಬೃಹತ್‌ ಚಳವಳಿ ಹಮ್ಮಿಕೊಂಡಿದೆ.

ADVERTISEMENT

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಎಪಿ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ, “ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ರಸ್ತೆ ಗುಂಡಿಗಳ ದರ್ಶನ ಪಡೆಯಬೇಕೆಂದು ಆಗ್ರಹಿಸಿ ಪೋಸ್ಟ್‌ ಕಾರ್ಡ್‌ ಚಳವಳಿ ಹಮ್ಮಿಕೊಂಡಿದ್ದೇವೆ. ಜೂನ್‌ 17ರ ಶುಕ್ರವಾರದಂದು ಪಕ್ಷದ ಕಾರ್ಯಕರ್ತರು ರಸ್ತೆಗುಂಡಿಗಳ ಬಳಿ ವಾಹನ ಸವಾರರೊಂದಿಗೆ ಮಾತನಾಡಿ, ʻಪ್ರಧಾನಿಗಳೇ ಬೆಂಗಳೂರಿನ ರಸ್ತೆ ಗುಂಡಿಗಳ ಸೊಬಗನ್ನು ನೋಡಬನ್ನಿʼ ಎಂದು ಬರೆದಿರುವ ಪೋಸ್ಟ್‌ಕಾರ್ಡ್‌ಗಳನ್ನು ನೀಡಲಿದ್ದಾರೆ. ಇದನ್ನು ವಾಹನ ಸವಾರರು ಪ್ರಧಾನಿಗೆ ಕಳುಹಿಸಲಿದ್ದಾರೆ” ಎಂದು ತಿಳಿಸಿದರು.

“ಬೆಂಗಳೂರಿನ ರಸ್ತೆಗಳಿಗಾಗಿ ರಾಜ್ಯ ಸರ್ಕಾರದ ಬೊಕ್ಕಸದಿಂದ ಕಳೆದ ಐದು ವರ್ಷಗಳಲ್ಲಿ 20 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ಬಿಡುಗಡೆಯಾಗಿದೆ. ಬಿಜೆಪಿಯ ಭ್ರಷ್ಟಾಚಾರದಿಂದಾಗಿ ಆ ಹಣವು ಜನಪ್ರತಿನಿಧಿಗಳ ಜೇಬು ಸೇರಿ, ರಸ್ತೆಗಳ ತುಂಬಾ ಗುಂಡಿಗಳಾಗಿವೆ. ಇದರ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ನಿರಂತರವಾಗಿ ಪ್ರತಿಭಟನೆ, ಅಭಿಯಾನಗಳನ್ನು ಮಾಡಿ, ಸುಮಾರು 70ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದೆ. ಆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ ಗುಂಡಿಗಳಿಂದ ಅಪಘಾತ ಸಾಮಾನ್ಯವಾಗಿದ್ದು, ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಸೌಜನ್ಯವೂ ಈ ಸರ್ಕಾರಕ್ಕಿಲ್ಲ” ಎಂದು ಮೋಹನ್‌ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ಎಎಪಿಯ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್‌ ರಾಥೋಡ್‌ ಮಾತನಾಡಿ, “ಬೆಂಗಳೂರು ರಾಜ್ಯ ರಾಜಧಾನಿ ಮಾತ್ರವಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ನಗರವಾಗಿದೆ. ದೇಶದಲ್ಲೇ ಅತಿಹೆಚ್ಚು ತೆರಿಗೆ ಸಂಗ್ರಹವಾಗುವ ಎರಡನೇ ದೊಡ್ಡ ನಗರವಿದು. ಆದರೆ ಡಬಲ್‌ ಎಂಜಿನ್‌ ಸರ್ಕಾರವೆಂದು ಕರೆದುಕೊಳ್ಳುವ ಬಿಜೆಪಿ ಸರ್ಕಾರವು ನಗರದ ಹೆಸರನ್ನು ಉದ್ಧಾರ ಮಾಡುವ ಬದಲು ಹಾಳು ಮಾಡುತ್ತಿದೆ. ರಸ್ತೆ ಗುಂಡಿಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಯಲ್ಲಿ ಬಿಜೆಪಿ ತೋರುತ್ತಿರುವ ನಿರ್ಲಕ್ಷ್ಯದಿಂದಾಗಿ ಇಲ್ಲಿರುವ ಬೃಹತ್‌ ಉದ್ದಿಮೆಗಳು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

ನೂತನ ರಾಜ್ಯ ಕಚೇರಿ:

ಆಮ್‌ ಆದ್ಮಿ ಪಾರ್ಟಿಯ ನೂತನ ರಾಜ್ಯ ಪ್ರಧಾನ ಕಚೇರಿಯು ಕುಮಾರ ಪಾರ್ಕ್‌ ವೆಸ್ಟ್‌ನಲ್ಲಿರುವ ರೈಲ್ವೆ ಪ್ಯಾರಲೆಲ್‌ ರಸ್ತೆಯಲ್ಲಿ ಸಿದ್ಧವಾಗಿದ್ದು, ಜೂನ್‌ 16ರ ಗುರುವಾರ ಬೆಳಗ್ಗೆ 11:00 ಗಂಟೆಗೆ ಉದ್ಘಾಟನೆಯಾಗಲಿದೆ. ಪಕ್ಷದ ಕರ್ನಾಟಕ ಉಸ್ತುವಾರಿ ಹಾಗೂ ರಾಷ್ಟ್ರೀಯ ವಕ್ತಾರರಾದ ದಿಲೀಪ್‌ ಪಾಂಡೆಯವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮೋಹನ್‌ ದಾಸರಿ ತಿಳಿಸಿದರು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಮಧ್ಯಪ್ರದೇಶದಲ್ಲಿ ಪಿಜ್ಜಾ ಡೆಲವರಿ ಗರ್ಲ್‌ಗೆ ಮನಬಂದಂತೆ ಥಳಿಸಿದ ಯುವತಿಯರ ಗುಂಪು !

Next Post

ಮುನ್ನೂರಕ್ಕೂ ಅಧಿಕ ಮನೆಗಳ‌ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ ವಸತಿ ಸಚಿವ ವಿ.ಸೋಮಣ್ಣ

Related Posts

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..
Top Story

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

by ಪ್ರತಿಧ್ವನಿ
May 23, 2026
0

ಮುಖ್ಯಾಂಶಗಳು.. * ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ * 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ * ಎಲ್ಲ...

Read moreDetails
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
Next Post
ಮುನ್ನೂರಕ್ಕೂ ಅಧಿಕ ಮನೆಗಳ‌ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ ವಸತಿ ಸಚಿವ ವಿ.ಸೋಮಣ್ಣ

ಮುನ್ನೂರಕ್ಕೂ ಅಧಿಕ ಮನೆಗಳ‌ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ ವಸತಿ ಸಚಿವ ವಿ.ಸೋಮಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada