• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಕಂದರಾಬಾದ್​ – ತಿರುಪತಿ ವಂದೇ ಭಾರತ್​ಗೆ ಪ್ರಧಾನಿ ಮೋದಿ ಹಸಿರು ನಿಶಾನೆ

Any Mind by Any Mind
April 8, 2023
in Top Story, ಇದೀಗ, ಕರ್ನಾಟಕ, ದೇಶ
0
ಸಿಕಂದರಾಬಾದ್​ – ತಿರುಪತಿ ವಂದೇ ಭಾರತ್​ಗೆ ಪ್ರಧಾನಿ ಮೋದಿ ಹಸಿರು ನಿಶಾನೆ
Share on WhatsAppShare on FacebookShare on Telegram

ಹೈದರಾಬಾದ್; ತೆಲಂಗಾಣ : ಏ.೦೮: ಹೈದರಾಬಾದ್​ಗೆ ಶನಿವಾರ ಭೇಟಿ ನೀಡಿರುವ ಪ್ರಧಾನಿ  ಮೋದಿ ಅವರು ಸಿಕಂದರಾಬಾದ್ – ತಿರುಪತಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಆಂಧ್ರಪ್ರದೇಶ ಮತ್ತು ತೆಲಂಗಾಣದ ನಡುವಿನ ಎರಡನೇ ವಂದೇ ಭಾರತ್​ ರೈಲು ಇದಾಗಿದೆ. ಮೂರು ತಿಂಗಳ ಅಂತರದಲ್ಲಿ ಎರಡನೇ ಸೆಮಿ ಹೈಸ್ಪೀಡ್ ಎಕ್ಸ್‌ಪ್ರೆಸ್ ರೈಲು ಕಾರ್ಯಾರಂಭಗೊಂಡಿದೆ. ಇದರ ಜೊತೆಗೆ ಇಂದು ಪ್ರಧಾನಿ ಮೋದಿ ಅವರು ಎರಡೂ ತೆಲುಗು ರಾಜ್ಯಗಳ ಜನರಿಗೆ ಅನುಕೂಲವಾಗುವಂತೆ 11,300 ಕೋಟಿ ರೂ.ಗಳ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಿದ್ರು. 1,350 ಕೋಟಿ ವೆಚ್ಚದ ರೂ. ವೆಚ್ಚದ ಎಐಐಎಂಎಸ್ ಬೀಬಿನಗರ ಮತ್ತು 7850 ಕೋಟಿ ರೂ. ಅಂದಾಜಿನ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇವು ಎರಡು ರಾಜ್ಯಗಳ ನಡುವೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವ ಗುರಿ ಹೊಂದಿದೆ. ಇದರ ಜೊತೆಗೆ 720 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಸಿಕಂದರಾಬಾದ್ ರೈಲು ನಿಲ್ದಾಣದ ಅಭಿವೃದ್ಧಿ ಯೋಜನೆಗೂ ಇದೇ ವೇಳೆ ಚಾಲನೆ ನೀಡಲಿದ್ದಾರೆ.

ADVERTISEMENT

ಪ್ರಯಾಣದ ಅವಧಿ ಕಡಿತ: ಸಿಕಂದರಾಬಾದ್ – ತಿರುಪತಿ ನಡುವೆ ಆರಂಭವಾಗಿರುವ ದೇಶದ 13 ನೇ ವಂದೇ ಭಾರತ್ ರೈಲು ಇದಾಗಿದ್ದು, ನಲ್ಗೊಂಡ, ಗುಂಟೂರು, ಒಂಗೋಲ್​ ಮತ್ತು ನೆಲ್ಲೂರಿನಲ್ಲಿ ನಿಲುಗಡೆ ಹೊಂದಿದೆ. ಎರಡು ನಗರಗಳ ನಡುವೆ 660 ಕಿಮೀ ಅಂತರವನ್ನು ಇದು ಹೊಂದಿದೆ. ಎಕ್ಸ್​ಪ್ರೆಸ್​ ರೈಲಿನಿಂದ ಪ್ರಯಾಣದ ಸಮಯ ಸುಮಾರು ಮೂರೂವರೆ ಗಂಟೆಗಳಷ್ಟು ಕಡಿತವಾಗಲಿದೆ. ಒಂದು ನಿಮಿಷ ಅಥವಾ 52 ಸೆಕೆಂಡುಗಳಲ್ಲಿ 100 ಕಿಮೀ ವೇಗದಲ್ಲಿ ರೈಲು ಸಂಚಾರ ನಡೆಸಲಿದೆ.

ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳು, ಪವರ್ ಬ್ಯಾಕಪ್, ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆಗಳು ಮತ್ತು ವ್ಯಾಕ್ಯೂಮ್ ಟಾಯ್ಲೆಟ್‌ಗಳನ್ನು ಅಳವಡಿಸಲಾಗಿದೆ. ವಂದೇ ಭಾರತ್ ರೈಲು ಸಿಕಂದರಾಬಾದ್‌ನಿಂದ ತಿರುಪತಿಗೆ ಬೆಳಿಗ್ಗೆ 6 ಗಂಟೆಗೆ ಹೊರಟರೆ ಮಧ್ಯಾಹ್ನ 2:30 ಕ್ಕೆ ಗಮ್ಯಸ್ಥಾನ(ತಿರುಪತಿ) ತಲುಪುತ್ತದೆ. 8 ಗಂಟೆ 30 ನಿಮಿಷಗಳ ಪ್ರಯಾಣ ಅವಧಿ ಹೊಂದಿದೆ. ಇದರಿಂದ ತೆಲಂಗಾಣದಿಂದ ಹೊರಡುವ ಭಕ್ತರಿಗೆ ಭಾರಿ ಅನುಕೂಲ ಆಗಲಿದೆ.

 ಆಹ್ವಾನಕ್ಕೆ ಮತ್ತೆ ಬಾರದ ಸಿಎಂ ಕೆಸಿಆರ್​: ಪ್ರಧಾನಿ ನರೇಂದ್ರ ಮೋದಿ ಅವರ ಟೀಕಾಕಾರರಾದ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ರಾವ್​ ಅವರುಈ ಬಾರಿಯೂ ಪ್ರಧಾನಿಗಳನ್ನು ಆಹ್ವಾನಿಸಲು ಆಗಮಿಸಿರಲಿಲ್ಲ. ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ರಾಜ್ಯಪಾಲೆ ಡಾ.ತಮಿಳಿಸೈ ಸುಂದರರಾಜನ್ ಮತ್ತು ಇತರ ಗಣ್ಯರು ಬರಮಾಡಿಕೊಂಡರು.

Tags: Bandi Sanjay KumarChennai Central Railway StationCMK.ChandrasekharRaoGovernor Dr TamilisaiHyderabadinaugurate in both the cities is over Rs. 13inaugurate projectsModi flags off Vande Bharat ExpressPM ModiPMOSecunderabad and TirupatiTelanganaUnion Minister G. Kishan ReddyVande Bharat Express
Previous Post

ನನಗೆ ಚುನಾವಣಾ ಅಖಾಡದಲ್ಲಿ ಕುಸ್ತಿ ಇಷ್ಟ, ಅವಿರೋಧ ಆಯ್ಕೆ ಸೇರಲ್ಲ : ಸಿಎಂ ಬೊಮ್ಮಾಯಿ

Next Post

ಏಪ್ರಿಲ್‌ 14ಕ್ಕೆ ʻಮಾರಿಗುಡ್ಡದ ಗಡ್ಡಧಾರಿಗಳʼ ಅಬ್ಬರ

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಏಪ್ರಿಲ್‌ 14ಕ್ಕೆ ʻಮಾರಿಗುಡ್ಡದ ಗಡ್ಡಧಾರಿಗಳʼ ಅಬ್ಬರ

ಏಪ್ರಿಲ್‌ 14ಕ್ಕೆ ʻಮಾರಿಗುಡ್ಡದ ಗಡ್ಡಧಾರಿಗಳʼ ಅಬ್ಬರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada