• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಭದ್ರತಾ ಲೋಪ : ಪ್ರಯಾಣ ದಾಖಲೆಗಳನ್ನು ಸಂರಕ್ಷಿಸುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
January 7, 2022
in ರಾಜಕೀಯ
0
ಪ್ರಧಾನಿ ಭದ್ರತಾ ಲೋಪ : ಪ್ರಯಾಣ ದಾಖಲೆಗಳನ್ನು ಸಂರಕ್ಷಿಸುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram

ಮುಂಬರುವ ಪಂಚರಾಜ್ಯ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚಿಗೆ ಪಂಜಾಬಿಗೆ ಭೇಟಿ ನೀಡಿದ್ದರು. ಫೀರೋಜಪುರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಮಾವೇಶವನ್ನು ಉದ್ದೇಶಿಸಿ ಮಾತನಾಡುವವರಿದ್ದರು. ಆದರೆ, ಕಾರಣಾಂತರಗಳಿಂದ ಭದ್ರತಾ ಲೋಪ ಎದುರಾದ ಕಾರಣ ಪ್ರಧಾನಿ ಮೋದಿ 20 ನಿಮಿಷಗಳ ಕಾಲ ರಸ್ತೆಯಲ್ಲೇ  ಕಾಯುವಂತಾಯಿತು. ಈ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರುಗಳು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ಬಗ್ಗೆ ವಿಸ್ತೃತ ತನಿಖೆ ನಡೆಸಲೆಬೇಕು ಎಂದು ವ್ಯಾಪಕವಾಗಿ ಕೇಳಿ ಬಂದಿದೆ.

ADVERTISEMENT

ಆದರೆ, ಇದೀಗ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿದ್ದು ಭದ್ರತಾ ಲೋಪವಾಗಿರುವ ಕುರಿತು ಪ್ರಧಾನಿ ಪ್ರಯಾಣದ ದಾಖಲೆಗಳನ್ನು ಸಂರಕ್ಷಿಸುವಂತೆ ಆದೇಶಿಸಿದೆ. ಈ ಬಗ್ಗೆ ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ನ ರಿಜಿಸ್ಟಾರ್ ಜನರಲ್ ಗೆ ಎಲ್ಲಾ ದಾಖಲೆಗಳನ್ನು ಒಂದೆಡೆ ಸಂರಕ್ಷಿಸುವಂತೆ  ಆದೇಶಿಸಿದೆ.  ಭದ್ರತಾ ಪಡೆಗಳು ಸಹ ಈ ವಿಚಾರವಾಗಿ ನಿಮ್ಮಗೆ ಸಹಕರಿಸಲಿವೆ ಎಂದು ಕೋರ್ಟ್ ಹೇಳಿದೆ.

ಕೇಂದ್ರ ಹಾಗೂ ಪಂಜಾಬ್ ಸರ್ಕಾರ ಪ್ರತ್ಯೇಕವಾಗಿ ತನಿಖೆಗೆ ಆದೇಶಿಸಿವೆ. ಈ ತನಿಖೆಗೆ ಸೋಮವಾರದವರೆಗೂ ಉಚ್ಚನ್ಯಾಯಾಲಯ ತಡೆ ನೀಡಿದೆ. ಭದ್ರತಾ ಲೋಪವು ಅಪರೂಪದ ಪ್ರಕರಣವಾಗಿದ್ದು ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮುಜುಗರವನ್ನ ಉಂಟು ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈ ವೇಳೆ ನ್ಯಾಯಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ ತನಿಖೆ ವಹಿಸುವುದರ ಬಗ್ಗೆ ಸುಪ್ರೀಂ ಕೋರ್ಟ್ ಹೆಚ್ಚು ಒಲವನ್ನ ಹೊಂದಿದೆ ಎಂದು ತಿಳಿದು ಬಂದಿದೆ.

ಘಟನೆಯ ನಂತರ ಪ್ರಧಾನಿಯವರ ಭದ್ರತೆ ವಿಚಾರದಲ್ಲಿ ಅತ್ಯಂತ ಗಂಭೀರ ಚರ್ಚೆಗಳಿಗೆ ದೇಶಾದ್ಯಂತ ಮುನ್ನುಡಿ ಬರೆಯಲಾಗಿತ್ತು. ಈ ಸಂಬಂಧ ಪ್ರಧಾನಿಯವರ ಪ್ರಯಾಣ ದಾಖಲೆ ಹಾಗೂ ಭದ್ರತೆ ಒದಗಿಸುವ ದಾಖಲೆಗಳನ್ನು ಈ ಕೂಡಲೇ ತರಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ.

ಈ ಘಟನೆಗೆ ಪಂಜಾಬ್ ಸರ್ಕಾರ ಹಾಗೂ ಪೊಲೀಸರು ಸಂಪೂರ್ಣ ಜವಾಬ್ದಾರರು ಭದ್ರತೆ ಲೋಪವಾದಂತ ಸಮಯದಲ್ಲಿ ವಿದ್ವಂಸಕ ಕೃತ್ಯಗಳು ನಡೆಯಬಹುದು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಇದು ಭಾರತಕ್ಕೆ ಮುಜುಗರವನ್ನುಂಟು ಮಾಡಿದೆ ಎಂದು ಮೆಹ್ತಾ ನ್ಯಾಪೀಠದ ಮುಂದೆ ವಿವರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಸರ್ಕಾರ, ಪ್ರಕರಣವನ್ನು ಲಘುವಾಗಿ ಪರಿಗಣಿಸಿಲ್ಲ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸರ್ಕಾರ 24 ಘಂಟೆಯೊಳಗೆ ತನಿಖೆಗೆ ಆದೇಶಿಸಿದೆ ಮತ್ತು ಸಮಿತಿಯನ್ನು ರಚಿಸಿದೆ. ತನಿಖೆಯನ್ನು ಮುಕ್ತವಾಗಿ ನಡೆಸಲಾಗುವುದು ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ತನಿಖಾ ಸಮಿತಿಗೆ ಸದಸ್ಯರನ್ನು ನೇಮಿಸಬಹುದು ಎಂದು ಪಂಜಾಬ್ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಮ್ಮ ರಾಜ್ಯದ ಮುಖ್ಯಮಂತ್ರಿಯವರು ಪ್ರಧಾನಿ ನಮ್ಮವರೆ ಎಂದು ಭಾವಿಸಿದ್ದಾರೆ. ಈ ವಿಚಾರದಲ್ಲಿ ಪಂಜಾಬ್ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿರುವದರಿಂದ ನಾವು ಸಹ ತನಿಖೆ ನಡೆಸಲು ಬಯಸುತ್ತಿದ್ದೇವೆ. ನ್ಯಾಯಾಲಯ ಏನೇ ಆದೇಶ ನೀಡಿದ್ದರು ಸೂಕ್ತ ಎಂದು ಭಾವಿಸಿ ಆದೇಶಕ್ಕೆ ತಲೆ ಬಾಗುತ್ತೇವೆ ಎಂದು ಹೇಳಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಪ್ರಧಾನಿ ಭದ್ರತಾ ಲೋಪಬಿಜೆಪಿಸುಪ್ರೀಂ ಕೋರ್ಟ್
Previous Post

ರೂಟ್ ಮ್ಯಾಪ್ ಬದಲಿಸಿ ಪ್ರತಿಭಟನಾಕಾರರಿರುವ ದಾರಿಯನ್ನೇ ಆರಿಕೊಂಡಿದ್ದೇಕೆ ಮೋದಿಯವರೇ? – ದಿನೇಶ್ ಗುಂಡೂರಾವ್ ಪ್ರಶ್ನೆ

Next Post

ಭದ್ರತಾ ಲೋಪ :‌ ಪ್ರಧಾನಿ ಸಮೀಪದಲ್ಲೇ ‘ಬಿಜೆಪಿ ಜಿಂದಾಬಾದ್’ ಎಂದು ಘೋಷಣೆ ಕೂಗುವ ವಿಡಿಯೋ  ವೈರಲ್

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಭದ್ರತಾ ಲೋಪ :‌ ಪ್ರಧಾನಿ ಸಮೀಪದಲ್ಲೇ ‘ಬಿಜೆಪಿ ಜಿಂದಾಬಾದ್’ ಎಂದು ಘೋಷಣೆ ಕೂಗುವ ವಿಡಿಯೋ  ವೈರಲ್

ಭದ್ರತಾ ಲೋಪ :‌ ಪ್ರಧಾನಿ ಸಮೀಪದಲ್ಲೇ 'ಬಿಜೆಪಿ ಜಿಂದಾಬಾದ್' ಎಂದು ಘೋಷಣೆ ಕೂಗುವ ವಿಡಿಯೋ  ವೈರಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada