ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಮೇ 30 ರಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ.ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನ ಮಂತ್ರಿ ಮೋದಿ ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಧ್ಯಾನ ಮಾಡಲಿದ್ದಾರೆ.ಕರಾವಳಿಯ ಸಮುದ್ರದ ಮಧ್ಯದಲ್ಲಿರುವ ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲೆಯ ಪ್ರತಿಮೆಯ ಸಮೀಪದಲ್ಲಿರುವ ಸುಂದರವಾದ ವಿಆರ್‌ಎಂಗೆ ಆಗಮಿಸುವ ನಿರೀಕ್ಷೆಯಿದೆ ಮತ್ತು ಜೂನ್ 1 ರಂದು ದೆಹಲಿಗೆ ತೆರಳುವ ನಿರೀಕ್ಷೆಯಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.ಪ್ರಧಾನ ಮಂತ್ರಿಗಳು ಧ್ಯಾನ ಮಾಡುವ ಈ ಬಂಡೆಯು ವಿವೇಕಾನಂದರ ಜೀವನದ ಮೇಲೆ ಪ್ರಮುಖ ಪ್ರಭಾವ ಬೀರಿದೆ. ವಿವೇಕಾನಂದರು ದೇಶಾದ್ಯಂತ ಸುತ್ತಾಡಿದ ನಂತರ ಇಲ್ಲಿಗೆ ಆಗಮಿಸಿದರು, ಮೂರು ದಿನಗಳ ಕಾಲ ಧ್ಯಾನ ಮಾಡಿದರು ಎಂಬ ನಂಬಿಕೆ ಇದೆ.ಸ್ಮಾರಕವನ್ನು ನಿರ್ಮಿಸಲಾಗಿರುವ ಈ ರಾಕ್ ಅನ್ನು ವಿವೇಕಾನಂದರು ಜ್ಞಾನೋದಯ ಪಡೆದ ಸ್ಥಳವೆಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ, ಈ ಸ್ಥಳದಲ್ಲಿ ಕನ್ಯಾಕುಮಾರಿ ದೇವಿಯು ಶಿವನನ್ನು ಪ್ರಾರ್ಥಿಸಿದಳು ಎಂದು ಪುರಾಣವು ಹೇಳುತ್ತದೆ. ಹೀಗಾಗಿ ಭಾರತದ ಧಾರ್ಮಿಕ ನಕ್ಷೆಯಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ...
Read moreDetails










