ಪ್ರಧಾನಿಗಳ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ಧರಾಮಯ್ಯ.
ಸಿದ್ಧರಾಮಯ್ಯರ ಟ್ವೀಟ್‌ಗೆ ಆರ್. ಅಶೋಕ್ ಮರು ಟ್ವೀಟ್.
X ನಲ್ಲಿ ಸಿಎಂ ಸಿದ್ಧರಾಮಯ್ಯರನ್ನು ದುರ್ಬಲ, ಅಸಹಾಯಕ ನೀವು ಎಂದ ಆರ್.ಅಶೋಕ್.
ಜೊತೆಗೆ ಸಿಎಂ ಸಿದ್ಧರಾಮಯ್ಯರಿಗೆ ಸವಾಲು ಹಾಕಿದ ಆರ್. ಅಶೋಕ್
ಆರ್.ಅಶೋಕ್. ವಿಧಾನಸಭೆಯ ವಿಪಕ್ಷ ನಾಯಕ.
ಸಿಎಂ @siddaramaiah ನವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು.
@HariprasadBK2 ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು.
ಡಿಸಿಎಂ @DKShivakumar ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು.
ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ.
ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ.
ನಿಮಗೆ ಖಂಡಿತ ಹೇಳಲು ಆಗಲ್ಲ. ಅದಕ್ಕೆ ತಮ್ಮನ್ನು ಈ ರಾಜ್ಯ ಕಂಡ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಜನ ಮಾತಾಡಿಕೊಳ್ಳುವುದು.