• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
October 23, 2025
in Top Story, ಕರ್ನಾಟಕ, ರಾಜಕೀಯ, ಶೋಧ
0
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Share on WhatsAppShare on FacebookShare on Telegram

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ADVERTISEMENT

ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಏಕಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ಹೊಸದಾಗಿ ಪ್ರಕರಣವನ್ನು ಪರಿಗಣಿಸಲು ಹೈಕೋರ್ಟ್ ಸೂಚಿಸಿತ್ತು. ತನಿಖೆಯ ಎಲ್ಲಾ ಅಂಶಗಳನ್ನೂ ಪರಿಶೀಲಿಸಿ ಕಾಗ್ನಿಜೆನ್ಸ್ ಪಡೆಯಬೇಕಿತ್ತು. ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆಗಳನ್ನು ಪರಿಗಣಿಸಿಲ್ಲ. ಆಡಿಯೋ ರೆಕಾರ್ಡಿಂಗ್ ಅನ್ನೂ ನ್ಯಾಯಾಲಯ ಪರಿಗಣಿಸಿಲ್ಲ. ಹೊಸದಾಗಿ ಕಾಗ್ನಿಜೆನ್ಸ್ ಪಡೆದಿರುವ ಆದೇಶ ಸರಿಯಿಲ್ಲವೆಂದು ವಾದ ಮಂಡಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರದ ಪರ ಎಸ್‌ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡನೆ ಮಾಡಿ, ಕೊಠಡಿಯಲ್ಲಿ ಲಾಕ್ ಮಾಡಿಕೊಂಡಿದ್ದರಿಂದ ಸಂತ್ರಸ್ತೆ ಹೇಳಿಕೆಯೇ ಮುಖ್ಯ. ಯಡಿಯೂರಪ್ಪ ಸೂಚನೆ ಮೇರೆಗೆ ಮೊಬೈಲ್​ನಲ್ಲಿದ್ದ ವಿಡಿಯೋ ಡಿಲೀಟ್ ಮಾಡಲಾಗಿದೆ. ಮೊಬೈಲ್ ರೆಕಾರ್ಡಿಂಗ್​ನಲ್ಲಿರುವುದು ಯಡಿಯೂರಪ್ಪ ಧ್ವನಿ ಎಂಬ ಬಗ್ಗೆ ಎಫ್​​ಎಸ್​ಎಲ್ ವರದಿಯಿದೆ. ಫಿರ್ಯಾದಿ ಮಹಿಳೆಗೆ ಬ್ಯಾಗ್​ನಲ್ಲಿ 2 ಲಕ್ಷ ರೂಪಾಯಿ ಹಣ ನೀಡಲಾಗಿದೆ. ನಡೆದ ಘಟನೆಯನ್ನು ಬಾಲಕಿಯೇ ವಿವರಿಸಿದ್ದಾಳೆ ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಇದು ರದ್ದುಪಡಿಸಬೇಕಾದ ಪ್ರಕರಣವೆಂದು ಮನವರಿಕೆಯಾಗಿಲ್ಲ. ಆದರೆ ಕಾಗ್ನಿಜೆನ್ಸ್ ಪಡೆದ ವಿಧಾನದ ಬಗ್ಗೆ ಪ್ರಶ್ನೆಗಳಿವೆ ಎಂದು ಹೇಳಿದ್ದು, ಆದೇಶ ಕಾಯ್ದಿರಿಸಿದೆ.

Lakshmi Hebbalkar: ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಹಾರ ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..!

ಏನಿದು ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್

ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಮನೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್​ನಲ್ಲಿ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ಕೇಸ್ ನೀಡಿತ್ತು.

ಸಿಐಡಿ ಅಧಿಕಾರಿಗಳು ಆರೋಪಿ ಯಡಿಯೂರಪ್ಪಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು.

ಆದರೆ ಪ್ರಕರಣವನ್ನು ರದ್ದು ಮಾಡಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಸದ್ಯ ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಈಗಾಗಲೇ ಸಿಕ್ಕಿದೆ. ಪ್ರಕರಣದ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯೂ ಇದೀಗ ಮುಕ್ತಾಯಗೊಂಡಿದ್ದು, ಆದೇಶ ಪ್ರಕಟವಾಗಬೇಕಿದೆ

Tags: BJPCongress Partyfir against muruga srimurugha seer pocso case updatesmurugha sri casePOCSO caseposco caseಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

Next Post

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada