ಮಂಗಳೂರು ಕುಕ್ಕರ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಲಿಂಕ್ ಸಿಕ್ಕಿದ್ದೇ ತಡ ಪೊಲೀಸರು ಜಿಲ್ಲೆಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
ಈ ನಡುವೆ ಮನೆ ಬಾಡಿಗೆ ಪಡೆಯಲು ಮೈಸೂರಲ್ಲಿ ಹೊಸ ರೂಲ್ಸ್ ಜಾರಿಯಾಗಿದ್ದು ನೂತನ ಪೊಲೀಸ್ ಆಯುಕ್ತ ಬಿ.ರಮೇಶ್ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ.
ಮೈಸೂರಿನಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ಅನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಸುತ್ತೋಲೆಯನ್ನ ಹೊರಡಿಸಿದ್ದಾರೆ.

ಮೈಸೂರು ನಗರದಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮನೆ ಮಾಲಿಕರು ಮನೆ ಮಾಲೀಕರು ಬಾಡಿಗೆ ಕೊಡುವ ಮೊದಲು, ಬಾಡಿಗೆದಾರರಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯವಾಗಿ ಪಡೆಯಬೇಕು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.
100 ರೂ ಪಾವತಿಸಿ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಬ್ಯಾಚುಲರ್, ಕುಟುಂಬಗಳಿಗೆ, ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿ ಹಾಕಬೇಕು. ಈಗಾಗಲೇ ಬಾಡಿಗೆ ಇರುವವರ ಬಗ್ಗೆ ಮಾಹಿತಿ ನೀಡಬೇಕು. ಈ ನಿಯಮವನ್ನು ಎಲ್ಲಾ ಠಾಣೆಗಳು ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಶಾರಿಖ್ ನಕಲಿ ಗುರುತಿನ ಚೀಟಿ ನೀಡಿ ಮೈಸೂರಿನಲ್ಲಿ ರೂಮ್ ಬಾಡಿಗೆಗೆ ಪಡೆದಿದ್ದನ್ನು ಮತ್ತು ನಗರದ ಪ್ರಮುಖ ಸ್ಥಳಗಳಲ್ಲಿ ಸ್ಪೋಟಕ್ಕೆ ಸಂಚು ರೂಪಿಸಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
