ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡುತ್ತಿದ್ದ ವೇಳೆ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದ್ದು, ಇಂತಹ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರು ಆ್ಯಂಬುಲೆನ್ಸ್ ಗೆ ಟೈರ್ ಚೇಂಜ್ ಮಾಡಿ, ರೋಗಿಯ ಪ್ರಾಣ ಉಳಿಸಿ ಸಮಯದಲ್ಲಿ ಮಾನವೀಯತೆ ಮೆರೆದಿದ್ದಾರೆ.
ಈ ಘಟನೆಯು ಫೆ.2 ರಂದು ಮದ್ಯಾಹ್ನ ಸಿಐಡಿ ಕಚೇರಿಯಲ್ಲಿ ಮುಂದೆ ನಡೆದಿದ್ದು, ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದಾರೆ.

ಮಾನವೀಯ ಮೌಲ್ಯಗಳೇ ಇಲ್ಲದ ಇಂದಿನ ದಿನಗಳಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಸಹಾಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.





