ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ ಡಿಜಿಐಜಿಪಿ ಡಾ.ಸಲೀಂ (Dr saleem) ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಇನ್ಮುಂದೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಹೊಸ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಅನುಸರಿಸಲು ಪೊಲೀಸರಿಗೆ ಸಿಪಿಆರ್ ತರಬೇತಿ ನೀಡಲು ಇಲಾಖೆ ಮುಂದಾಗಿದೆ.ಕಾಲ್ತುಳಿತ ಘಟನೆ ಬಳಿಕ ಪೊಲೀಸ್ ತರಬೇತಿ ಕೈಪಿಡಿಯನ್ನು ಪರಿಷ್ಕರಣೆ ಮಾಡಲಾಗಿದೆ.

ಹೀಗಾಗಿ ತರಬೇತಿ ಅವಧಿಯಲ್ಲಿಯೇ ಜನಸಂದಣಿ ನಿರ್ವಹಣೆ ಮತ್ತು ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್ (ಸಿಪಿಆರ್) ಕುರಿತು ತರಬೇತಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ. ಇನ್ನು ಆಂಬುಲೆನ್ಸ್ ನಿಲುಗಡೆ ಪ್ರದೇಶ ಮತ್ತು ನಿಯಂತ್ರಣ ಕೊಠಡಿ ಮತ್ತಿತರ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.

ಸಾರ್ವಜನಿಕ ಸುರಕ್ಷತೆಗಾಗಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು,ಜನಸಂದಣಿ ಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು,ಅಪಾಯಗಳನ್ನು ಕಡಿಮೆ ಮಾಡುವುದು, ಸಮನ್ವಯ ವನ್ನು ಹೆಚ್ಚಿಸುವುದು ಮತ್ತು ತುರ್ತು ಪರಿಸ್ಥಿತಿಗಳಿಗೆ ತ್ವರಿತ ಪ್ರಕ್ರಿಯೆ ನೀಡುವುದರ ಬಗ್ಗೆ ಗಮನ ಹರಿಸಲಾಗುತ್ತದೆ.
ಇನ್ನು ಜನಸಂದಣಿ ನಿರ್ವಹಣೆಗೆ ಪೂರ್ವ ಸಿದ್ಧತೆ, ಆಯೋಜಕರ ಜತೆ ಸಮನ್ವಯ,ಹಾಗೂ ಪೊಲೀಸ್ ಬಂದೋಬಸ್ತ್ಗೆ ಅಗತ್ಯ ಕ್ರಮ ವಹಿಸಬೇಕು. ಜನಸಮೂಹದ ವರ್ತನೆ ಪರಿಶೀಲಿಸುವುದು,ಆಗಮನ ನಿರ್ಗಮನ ದ್ವಾರಗಳನ್ನು ಗುರುತಿಸಿ ಪರಿಶೀಲನೆ, ಲಭ್ಯವಿರುವ ಪರಿಕರ-ಗಳನ್ನು ಬಳಸಿಕೊಂಡು ಸಂಭಾವ್ಯ ಅವಘಡ ತಡೆಯವುದು ಇದರ ಭಾಗವಾಗಿದೆ.