• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಕ್ರಮವಾಗಿ ನೆಲಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ

Any Mind by Any Mind
September 7, 2021
in ಕರ್ನಾಟಕ
0
ಅಕ್ರಮವಾಗಿ ನೆಲಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ
Share on WhatsAppShare on FacebookShare on Telegram

ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ವಿದೇಶಿ ನಾಗರಿಕರನ್ನು ಗುರುತಿಸಿ ಅವರು ನಡೆಸುತ್ತಿರುವ  ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕೆಂದು ರಾಜ್ಯ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಟ್ಟುನಿಟ್ಟಿನ  ಸೂಚನೆ ನೀಡಿದ್ದಾರೆ.

ADVERTISEMENT

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, “ರಾಜ್ಯದಲ್ಲಿ ಅಕ್ರಮವಾಗಿ ವೀಸಾ ಅವಧಿ ಮುಟ್ಟಿದರೂ ನೆಲಸಿರುವ ವಿದೇಶಿ ನಾಗರಿಕರು ಯಾವುದೇ ಅಕ್ರಮ ಚಟುವಟಿಕೆ, ದೇಶದ್ರೋಹಿ ಕೃತ್ಯ ಅಥವಾ ಸಮಾಜವಿರೋಧಿ ಕೃತ್ಯ ನಡೆಸದಂತೆ  ನಿಗಾ ವಹಿಸಬೇಕು, ಹಾಗೂ ಅವರ ಬಗ್ಗೆ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವಂತೆ ಪ್ರತ್ಯೇಕ ದಾಖಲಾತಿ ಗಳನ್ನೂ ನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಪರಾಧ ನಿಯಂತ್ರಣ ಹಾಗೂ ಅಪರಾಧಿಗಳ ವಿರುದ್ಧ ಹೂಡಲಾದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಸಮರ್ಥವಾಗಿ  ಮಂಡಿಸಿ, ಶಿಕ್ಷೆ ಕೊಡಿಸುವ ಪ್ರಮಾಣ ಹೆಚ್ಚಿಸುವುದರ ಮೂಲಕ, ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ವಿಶ್ವಾಸ ಮೂಡಿಸಬೇಕಾದ  ಅಗತ್ಯ ವಿದೆ  ಎಂಬುದನ್ನು ಪ್ರತಿಪಾದಿಸಲು ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಕರಾವಳಿ ರಕ್ಷಣಾ ಪಡೆಯನ್ನು ಬಲಪಡಿಸಬೇಕು, ಹಾಗೂ ಅಕ್ರಮವಾಗಿ ನುಸುಳುವುದನ್ನು ತಡೆಯಲು ನೌಕಾದಳ ಸಿಬ್ಬಂದಿಯೊಡನೆ  ಸದಾ ಸಂಪರ್ಕ ಸಾದಿಸಿ ದೇಶದ ಭದ್ರತೆ ಹಾಗೂ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಸೂಚನೆ ನೀಡಲಾಗಿದೆ, ಮತ್ತು ಈ ವಿಷಯದಲ್ಲಿ ಯಾವುದೇ ಅಜಾಗರೂಕತೆಗೆ ಆಸ್ಪದ ಇರಬಾರದು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮ ಜಾನುವಾರು ಸಾಗಣೆ ಹಾಗೂ ಹತ್ಯೆ ನಡೆಸಲು  ಯಾವುದೇ ಕಾರಣಕ್ಕೂ ಅವಕಾಶ ನೀಡದೆ , ಕಾನೂನು ಉಲ್ಲಂಘಿಸುವ  ಸಮಾಜ ವಿರೋಧಿ ಶಕ್ತಿಗಳನ್ನು ನಿಗ್ರಹಿಸಬೇಕು ಎಂದೂ ತಿಳಿಸಲಾಗಿದೆ, ಎಂದರು.

ಗ್ರಾಮೀಣ ಪ್ರದೇಶದಲ್ಲಿ ಗಸ್ತು ಹೆಚ್ಚಳ:

ಗ್ರಾಮೀಣ ಪ್ರದೇಶದಲ್ಲಿ ಪೋಲೀಸರ  ಗಸ್ತು ಪದ್ದತಿಯನ್ನು ಪರಿಷ್ಕರಿಸಿ ಅಪರಾಧ ಪ್ರಕರಣಗಳನ್ನು, ಗಣನೀಯವಾಗಿ ತಗ್ಗಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ, ಎಂದು ತಿಳಿಸಿದ ಸಚಿವರು  ಪಟ್ಟಣ ಪ್ರದೇಶದಲ್ಲಿ ಈ-ಗಸ್ತು (E-Beat system)  ವ್ಯವಸ್ಥೆಯನ್ನು ಬಲಪಡಿಸಲು ತೀರ್ಮಾನಿಸಲಾಗಿದೆ, ಎಂದು ಸಚಿವರು ತಿಳಿಸಿದ್ದಾರೆ.

ಪ್ರತಿ ಪೊಲೀಸ್ ಠಾಣೆಯಲ್ಲಿ ಇರುವ ‘ರೌಡಿ ಶೀಟರ್’ ಪಟ್ಟಿಯನ್ನು ಕಾನೂನಿನ ಮಾನದಂಡ ಪ್ರಕಾರ ಪುನಃ ಪರಿಶೀಲಿಸಿ, ಕನ್ನಡ-ಪರ, ರೈತ-ಪರ ಹಾಗೂ ಇನ್ನಿತರ ಜನಪರ ಚಳುವಳಿ ಭಾಗವಿಸಿದವರ ವಿರುದ್ಧ ದಾಖಲಾದ ‘ರೌಡಿ ಶೀಟರ್’ ಹಣೆಪಟ್ಟಿಯನ್ನು ವೈಜ್ಞಾನಿಕವಾಗಿ ಪರಿಷ್ಕರಿಸಬೇಕು ಹಾಗೂ ಅಮಾಯಕರ  ಹೆಸರು ಒಂದುವೇಳೆ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರಿಷ್ಕರಿಸಲು, ನಿರ್ಧಾರ ತೆಗೆದು ಕೊಳ್ಳಲು ಸೂಚಿಸಲಾಗಿದೆ, ಎಂದು ಸಚಿವರು ತಿಳಿಸಿದ್ದಾರೆ.

ರಾಷ್ಟ್ರ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲು, ಹಾಗೂ ಕೇಂದ್ರದ ರಾಷ್ಟೀಯ ತನಿಖಾ ದಳ (NIA) ದ ಜೊತೆಗೆ ಸಮನ್ವಯ ಸಾಧಿಸಲು ಬೆಂಗಳೂರು ಅಥವಾ ಮಂಗಳೂರಿನಲ್ಲಿ NIA ಘಟಕವನ್ನು ರಾಜ್ಯದಲ್ಲಿ ಸ್ಥಾಪಿಸುವ ಅಗತ್ಯದ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲೂ ನಿರ್ಧರಿಸಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.

Tags: Araga JnanendraBJPGovernment of KarnatakaHome MinistryKarnataka GovernmentMinistry of Home Affiarsಬಿಜೆಪಿ
Previous Post

ಕೊರೋನಾ, ಆಹಾರ ತುರ್ತು ಪರಿಸ್ಥಿತಿ, ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾ!

Next Post

ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಇಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಇಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಇಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada