ಲಾಕ್ಡೌನ್ ವೇಳೆ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲಪ್ರಯೋಗ ಮಾಡಿದ ಹಿನ್ನೆಲೆ, ಕರ್ನಾಟಕ ಹೈಕೋರ್ಟ್ ಪೊಲೀಸ್ ಇಲಾಖೆಗೆ ಸೂಚನೆ ಕೊಟ್ಟಿದೆ. ಲಾಕ್ಡೌನ್ ವೇಳೆ ಪೊಲೀಸರು ನಾಗರೀಕರೊಂದಿಗೆ ಸೌಜನ್ಯ ಮತ್ತು ತಾಳ್ಮೆಯಿಂದ ವರ್ತಿಸಬೇಕು ಎಂದಿದೆ.
ಲಾಕ್ ಡೌನ್ ಯಶಸ್ವಿಯಗೊಳಿಸಲು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುವ ಅಗತ್ಯವಿಲ್ಲ ಎಂದು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಬಗ್ಗೆ ಸರ್ಕಾರ ಪೊಲೀಸರಿಗೆ ನಿರ್ದೇಶಿಸಬೇಕೆಂದು ತಿಳಿಸಿದೆ. ಸಾರ್ವಜನಿಕರು ಕೂಡ ಸರ್ಕಾರದ ನಿಯಮವನ್ನು ಪಾಲಿಸಬೇಕೆಂದಿದೆ.
ಕರೋನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುವ ವೇಳೆ ಅರ್ಜಿದಾರರ ಪರ ವಕೀಲರು ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯವಾಗಿ ಬಲ ಪ್ರಯೋಗ ಮಾಡುತ್ತಿದ್ದಾರೆಂದು ಮುಖ್ಯ ನ್ಯಾಯಮೂರ್ತಿ ಎಎಸ್ ಓಕ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು ಅಂತಿಮವಾಗಿ, ಲಾಕ್ಡೌನ್ ಸಮಯದಲ್ಲಿ ಪೊಲೀಸರು ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಬೇಕು, ಕೋವಿಡ್ ನಿಯಮ ಪಾಲಿಸುವುದರ ಮೂಲಕ ನಾಗರಿಕರು ಸಹಕರಿಸಬೇಕು ಎಂದಿದೆ.
ಮೂಲ- NIE