ಮಠದಲ್ಲಿ ವಾಸವಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸದ್ಯ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಶರಣರ ಪ್ರಕರಣದಲ್ಲಿ ಇದೀಗ ಮತ್ತೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಠದ ಮಾಜಿ ಆಡಳಿತಧಿಕಾರಿ ಬಸವರಾಜನ್ ಪತ್ನಿ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಸೌಭಾಗ್ಯ ಬಸವರಾಜನ್‌ರನ್ನು ವಿದ್ಯಾರ್ಥಿನಿಯರಿಗೆ ಮುರುಘಾ ಶರಣರ ವಿರುದ್ದ ದೂರು ದಾಖಲಿಸುವಂತೆ ಪ್ರಚೋದಿಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಈ ಬಗ್ಗೆ ಪ್ರಕರಣವನ್ನ ದಾಖಲಿಸಿಕೊಳ್ಳುತ್ತಿದ್ದಂತೆಯೇ ಸೌಭಾಗ್ಯ ತಲೆಮಾರಿಸಿಕೊಂಡಿದ್ದರು ಮತ್ತು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ದಾವಣಗೆರೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್, ಶಿಕ್ಷಕ ಬಸವರಾಜೇಂದ್ರ, ಛಾಯಾಚಿತ್ರಗ್ರಾಹಕ ಮಯೂರ ಪೊಲೀಸರ ವಶದಲ್ಲಿದ್ದಾರೆ.












