ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದಂತೆ ನಡೆದಿದ ಎನ್ನಲಾದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು. ಇದನ್ನು ಖಂಡಿಸಿ ದೇಶಾದ್ಯಂತ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ವತಿಯಿಂದ ಇಡಿ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನ ನಡೆಸಲಾಯಿತ್ತು. ಲಾಲ್‌ಬಾಗ್ ಮುಖ್ಯದ್ವಾರದಿಂದ ಶಾಂತಿನಗರದಲ್ಲಿರುವ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಲು ಕಾಂಗ್ರೆಸ್ ನಾಯಕರು ಯೋಜಿಸಿದ್ದರು.
ಈ ವೇಳೆ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ಅರ್ಧದಲ್ಲೇ ತಡೆದರು ಈ ವೇಳೆ ಪೊಲೀಸರು ಹಾಗು ಪ್ರತಿಭಟನಾನಿರತರ ನಡುವೆ ಕೆಲಕಾಲ ವಾಗ್ವಾದವಾಯಿತ್ತು. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಟ್ಟು ಕಳುಹಿಸಿದ್ದಾರೆ.
