ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಭುಗಿಲೆದ್ದ ರಾಜಕೀಯ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅನ್ನು ಭೇಟಿ ಮಾಡುವುದಕ್ಕೆ ಸಾಧ್ಯವಾಗಲಿಲ್ಲ, ಏಕೆಂದರೆ ಅವರಿಗೆ ಕೋವಿಡ್-19 ಸೋಂಕು ತಗುಲಿದೆ ಎಂದು ಕಾಂಗ್ರೆಸ್ ರಾಜ್ಯ ವೀಕ್ಷಕ ಕಮಲನಾಥ್ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ಭವಿಷ್ಯದ ಮೇಲೆ ತೂಗುಗತ್ತಿ ನೇತಾಡುತ್ತಿರುವ ನಡುವೆಯೇ ಮಹಾರಾಷ್ಟ್ರ ಸಿಎಂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸುದ್ದಿಗೋಷ್ಠಿ ಸಂಜೆ 5 ಗಂಟೆಗೆ ಪೇಸ್ ಬುಕ್ ಲೈವ್ ನಲ್ಲಿ ಸುದ್ದಿಗೋಷ್ಟಿ ನಡೆಸುವುದಾ ಹೇಳಿದ್ದರು ನಂತರ ಅದು ತಡವಾಘಲಿದೆ ಎಂದು ಹೆಳಲಾಗಿದೆ.
ಹೌದು ಕರೋನಾ ಸೋಂಕು ತಗುಲಿರುವ ಹಿನ್ನೆಲೆ ಫೇಸ್ ಬುಕ್ ಲೈವ್ ಮೂಲಕ ರಾಜ್ಯದ ಜನರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.
ಮುಂಬೈನಲ್ಲಿ ಸಂಜೆ 5 ಗಂಟೆಯೊಳಗೆ ಸಭೆಗೆ ಹಾಜರಾಗುವಂತೆ ಶಿವಸೇನೆ ತನ್ನ ಎಲ್ಲಾ ಶಾಸಕರಿಗೆ ಈ ಹಿಂದೆ ಅಲ್ಟಿಮೇಟಮ್ ನೀಡಿತ್ತು, ಇಲ್ಲದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ. ಸರಿಯಾದ ಕಾರಣ ಮತ್ತು ಪೂರ್ವ ಮಾಹಿತಿ ಇಲ್ಲದೆ ಯಾರಾದರೂ ಸಭೆಗೆ ಗೈರುಹಾಜರಾದರೆ, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಅವರ ಸದಸ್ಯತ್ವವನ್ನು ರದ್ದುಗೊಳಿಸುವ ಕ್ರಮವನ್ನು ಪ್ರಾರಂಭಿಸಲಾಗುವುದು ಎಂಬುದನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.