ಚಾಮರಾಜನಗರ : ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡೋದಿಲ್ಲ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಘೋಷಣೆ ಮಾಡಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು ರಾಜಕೀಯ ನಿವೃತ್ತಿ ಬಗ್ಗೆ ಸೂಚನೆ ನೀಡಿದರು .

ನನಗೆ ನಿಂತುಕೊಂಡು ಭಾಷಣ ಮಾಡಲು ಶಕ್ತಿಯಲ್ಲ. ನನ್ನ ರಾಜಕೀಯ ಜೀವನದಲ್ಲಿ ಏಳು ಪ್ರಧಾನಿಗಳನ್ನು ಕಂಡಿದ್ದೇನೆ. ಇನ್ನು ನನಗೆ ರಾಜಕೀಯ ಜೀವನ ಸಾಕು ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.
ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನನಗೆ ರಾಜಕೀಯ ಜೀವನ ಸಾಕಾಗಿದೆ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ಸೂಚನೆ ನೀಡಿದ್ದಾರೆ .