• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಆರ್‌ಎಸ್‌ಎಸ್‌ಗಿರುವಂತಹ ಸಾಂಸ್ಥಿಕ ರಚನೆಯ ತಳಪಾಯ ರಾಜಕೀಯ ಪಕ್ಷಗಳಿಗೆ ಅಗತ್ಯ: ದೇವನೂರು ಮಹಾದೇವ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ರಾಜಕೀಯ
0
ಆರ್‌ಎಸ್‌ಎಸ್‌ಗಿರುವಂತಹ ಸಾಂಸ್ಥಿಕ ರಚನೆಯ ತಳಪಾಯ ರಾಜಕೀಯ ಪಕ್ಷಗಳಿಗೆ ಅಗತ್ಯ: ದೇವನೂರು ಮಹಾದೇವ
Share on WhatsAppShare on FacebookShare on Telegram

  ‘ರಾಜ್ಯದ ಮುಖ್ಯವಾಹಿನಿ ಸಮಾಜಮುಖಿ ರಾಜಕೀಯ ಪಕ್ಷಗಳಿಗೆ ಆರ್‌ಎಸ್‌ಎಸ್‌ ಶೈಲಿಯ ಸಾಂಸ್ಥಿಕ ರಚನೆಯ ತಳಪಾಯ ಹಾಗೂ ರಾಜಕೀಯ ಪ್ರಜ್ಞೆ ಅತ್ಯಗತ್ಯ’ ಎಂದು ಕನ್ನಡದ ಸಾಕ್ಷಿಪ್ರಜ್ಞೆ, ಲೇಖಕ ದೇವನೂರ ಮಹಾದೇವ ಹೇಳಿದ್ದಾರೆ.

ADVERTISEMENT

ಮೈಸೂರಿನಲ್ಲಿ ಮಂಗಳವಾರ ನಡೆದ ಪ್ರೊ.ಮಧುದಂಡವತೆ ಶತಮಾನೋತ್ಸವ ಪ್ರಯುಕ್ತ ‘ಮುಕ್ತ ಮತದಾನ– ಸಮರ್ಥ ಸರ್ಕಾರ’ – ಜನತಂತ್ರದ ‘ನೈಜ ಹಕ್ಕುದಾರರ ಧ್ವನಿ ಹಿಡಿದಿಡುವ ಡಯಗ್ನಾಸ್ಟಿಕ್‌ ವರದಿ’ಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಸಮಾಜಮುಖಿ ರಾಜಕೀಯ ಪಕ್ಷಗಳ ಸಾಂಸ್ಥಿಕ ರಚನೆ ಗಟ್ಟಿಯಿದ್ದರೂ ರಾಜಕೀಯ ಪ್ರಜ್ಞೆಯ ಕೊರತೆಯಿಂದಾಗಿ ಯಾವುದೇ ಅಲೆ ಎಬ್ಬಿಸುತ್ತಿಲ್ಲ. ತನ್ನ ರಾಜಕೀಯ (ಬಿಜೆಪಿಯ) ಪಕ್ಷದ ಗೆಲುವಿನಲ್ಲೇ ತನ್ನ ಅಳಿವು– ಉಳಿವು ಎಂದು ಸಂಘ ಪರಿವಾರವು ಕಾರ್ಯನಿರ್ವಹಿಸುವಂತೆ ಸಮಾಜಮುಖಿ ಪಕ್ಷಗಳ ಸಾಂಸ್ಥಿಕ ಸಂಘಟನೆಗಳು ವರ್ತಿಸುತ್ತಿಲ್ಲ’ ಎಂದು ಹೇಳಿದ್ದಾರೆ.

ಬೆಂಗಳೂರಿನ ಸಮಾಜವೇದಿಕೆ, ದೆಹಲಿಯ ಜನತಾಂತ್ರಿಕ ಸಮಾಜವಾದ ಸಂಘಟನೆ ಸಿದ್ಧಪಡಿಸಿದ ವರದಿಯನ್ನು ಹಿತ್ತಲಗಿಡ ಪ್ರಕಾಶನ ಪ್ರಕಟಿಸಿದ್ದು, ಬಿಜೆಪಿಗೆ ಆರ್‌ಎಸ್‌ಎಸ್‌ ಎಂಬ ಗಟ್ಟಿ ಸಾಂಸ್ಥಿಕ ತಳಪಾಯವಿರುವುದರ ಬಗ್ಗೆ ವರದಿಯಲ್ಲಿ ಪರಾಮರ್ಶಿಸಲಾಗಿದೆ ಎಂದು ದೇವನೂರು ಹೇಳಿದ್ದಾರೆ.

ತಳಮಟ್ಟದವರೆಗೂ ಬೇರೂರಿರುವ ಪ್ರಗತಿಪರ ಸಂಘಟನೆಗಳು, ಸಂಘ– ಸಂಸ್ಥೆಗಳು ಹೊಸ ರಾಜಕೀಯ ಪ್ರಯೋಗಕ್ಕೆ ಈ ರೀತಿಯ ಸಾಂಸ್ಥಿಕ ರಚನೆಯನ್ನು ಒದಗಿಸಬಹುದು. ಆಮ್‌ ಆದ್ಮಿ ಪಕ್ಷವು ಅಲೆ ಎಬ್ಬಿಸುತ್ತಿದ್ದರೂ ಇತರ ಸಮಾನ ಪಕ್ಷಗಳೊಂದಿಗೆ ಕೈಜೋಡಿಸದೆ ಒಂಟಿಯಾಗಿರುವುದೇ ನಿರೀಕ್ಷಿತ ಫಲಿತಾಂಶ ನೀಡದಿರಲು ಕಾರಣ ಎಂಬುದನ್ನು ವರದಿ ಗುರುತಿಸಿದೆ’ ಎಂದು ಹೇಳಿದ್ದಾರೆ.

‘ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಇದುವರೆಗೂ ಆಳ್ವಿಕೆ ಸಂಸಾರ ನಡೆಸಿವೆ. ಅವುಗಳನ್ನು ಬಿಟ್ಟು ಆಳ್ವಿಕೆ ಸಂಸಾರ ಮಾಡದಿರುವ ನವಪಕ್ಷಗಳ ಕಡೆಗೆ ಶೇ 46ರಷ್ಟು ಮತದಾರರು ಒಲವು ತೋರಿದ್ದಾರೆ’ ಎಂದರು.

ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜ್ಯದಲ್ಲಿ ಮೋದಿ, ಅಮಿತ್‌ ಶಾ ಹೆಚ್ಚು ಓಡಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಕಸಿಪದ ‘ಮೊದಾನಿ’ ಚಲಾವಣೆಯಲ್ಲಿದೆ. ಮೋದಿ, ಅದಾನಿ ಸೇರಿದ ಒಂದೇ ಪದ, ಒಂದೇ ಹೆಸರು ಇದು. ಅಧಿಕಾರ ಮತ್ತು ಕುರುಡು ಕಾಂಚಾಣ ಸೇರಿ ಒಂದೇ ಪದವಾಗಿದೆ, ಉಳಿಗಾಲವಿಲ್ಲ’ ಎಂದು ದೇವನೂರ ಮಹಾದೇವ ಹೇಳಿದರು.

Previous Post

ಸ್ವಾತಂತ್ರ ಭಾರತದ ಬಹುದೊಡ್ಡ ಆರ್ಥಿಕ ಹಗರಣದ ರೂವಾರಿ ಗೌತಮ್ ಶಾಂತಿಲಾಲ್ ಅದಾನಿ

Next Post

ದೋವಲ್‌ ಯಡವಟ್ಟು ಮಾಡಿದ್ದಾರೆ, ಅವರನ್ನು ವಜಾಗೊಳಿಸದಿದ್ದರೆ ಮೋದಿ ರಾಜಿನಾಮೆ ನೀಡಬೇಕಾಗುತ್ತದೆ: ಸ್ವಾಮಿ

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ದೋವಲ್‌ ಯಡವಟ್ಟು ಮಾಡಿದ್ದಾರೆ, ಅವರನ್ನು ವಜಾಗೊಳಿಸದಿದ್ದರೆ ಮೋದಿ ರಾಜಿನಾಮೆ ನೀಡಬೇಕಾಗುತ್ತದೆ: ಸ್ವಾಮಿ

ದೋವಲ್‌ ಯಡವಟ್ಟು ಮಾಡಿದ್ದಾರೆ, ಅವರನ್ನು ವಜಾಗೊಳಿಸದಿದ್ದರೆ ಮೋದಿ ರಾಜಿನಾಮೆ ನೀಡಬೇಕಾಗುತ್ತದೆ: ಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!