• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ

ಪ್ರತಿಧ್ವನಿ by ಪ್ರತಿಧ್ವನಿ
June 10, 2026
in Top Story
0
ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ರಾಜ್ಯ ರಾಜಕೀಯದಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಗ್ವಾದ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತಮಗೆ ಜೀವ ಬೆದರಿಕೆ ಬಂದಿರುವುದನ್ನು ಉಲ್ಲೇಖಿಸಿ, “ಆರ್‌ಎಸ್‌ಎಸ್‌ ಬಳಸಿಕೊಂಡು ನನಗೆ ಬೆದರಿಕೆ ಹಾಕಲಾಗುತ್ತಿದೆ. ನಿಮ್ಮ ರಾಜಕೀಯ ಮೇಲಾಧಿಕಾರದ ಸಂಘಟನೆಯ ನೋಂದಣಿಗಾಗಿ ದಾಖಲೆಗಳನ್ನು ಸಿದ್ಧವಾಗಿಡಿ” ಎಂದು ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

DCM DrG Parameshwar : DCM ಪರಮೇಶ್ವರ್‌, KN ರಾಜಣ್ಣ ಮಾತುಕತೆ..! #knrajanna #congress #pratidhvani

ಸುಧೀರ್ ಬಂಗೇರ ಎಂಬಾತ ‘ಎಕ್ಸ್‌’ನಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕರ್ನಾಟಕದ ಅಧಿಕೃತ ಖಾತೆಯನ್ನು ಟ್ಯಾಗ್‌ ಮಾಡಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, “ನಾನು ಗೃಹ ಸಚಿವನಾಗಿ ಅಧಿಕಾರ ವಹಿಸಿಕೊಂಡು 48 ಗಂಟೆಗಳೂ ಕಳೆದಿಲ್ಲ. ಆದರೆ ನಿಮ್ಮ ಭಯ, ಆತಂಕ ಮತ್ತು ಅಸಹನೆ ಈಗಲೇ ಹೊರಹೊಮ್ಮುತ್ತಿದೆ. ಆರ್‌ಎಸ್‌ಎಸ್‌ ಹೆಸರಿನಲ್ಲಿ ನನ್ನನ್ನು ನಿಂದಿಸುವ ಹಾಗೂ ಬೆದರಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

 

ಇದಲ್ಲದೆ, “ನಿಮ್ಮ ರಾಜಕೀಯ ಮೇಲಾಧಿಕಾರಿಗಳಿಗೆ ನನ್ನ ನಮಸ್ಕಾರ ತಿಳಿಸಿ. ಅವರ ಸಂಘಟನೆಯ ನೋಂದಣಿಗೆ ಬೇಕಾದ ದಾಖಲೆಗಳನ್ನು ಸಿದ್ಧವಾಗಿಡಲು ಹೇಳಿ” ಎಂದು ವ್ಯಂಗ್ಯವಾಡಿದ್ದಾರೆ.

HD Kumaraswamy :  ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ ಕುಮಾರಸ್ವಾಮಿ ವಾಗ್ದಾಳಿ..!

ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ನಿಮ್ಮ ಪಕ್ಷದ ಮುಖ್ಯಸ್ಥರ ಸೂಚನೆಯ ಮೇರೆಗೆ ನೀವು ಆರ್‌ಎಸ್‌ಎಸ್‌ ವಿರುದ್ಧ ಮಾತನಾಡುತ್ತಿದ್ದೀರಿ. ಹಲವು ಸರ್ಕಾರಗಳು ಆರ್‌ಎಸ್‌ಎಸ್‌ ಅನ್ನು ನಿಷೇಧಿಸಲು ಪ್ರಯತ್ನಿಸಿದ್ದವು. ಆದರೆ ಜನತೆ ಆ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ” ಎಂದು ಹೇಳಿದ್ದಾರೆ.

“ಹಿಂದೂ ಸಮಾಜದ ಸಂಘಟನೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಆರ್‌ಎಸ್‌ಎಸ್‌ ಸಂವಿಧಾನದ ಚೌಕಟ್ಟಿನೊಳಗೇ ಕೆಲಸ ಮಾಡುತ್ತಿದೆ. ಸಂಘಕ್ಕೆ 100 ವರ್ಷ ಪೂರೈಸಿರುವುದು ನಿಮ್ಮ ಹತಾಶೆಗೆ ಕಾರಣವಾಗಿದೆ” ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

HD Kumaraswamy on DKS : ಡಿಕೆ ಶಿವಕುಮಾರ್‌ ಮೇಲೆ ಕುಮಾರಸ್ವಾಮಿ ಸಾಪ್ಟ್‌ ಕಾರ್ನರ್..! #pratidhvani

ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಕೂಡ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಆರ್‌ಎಸ್‌ಎಸ್‌ಗೆ ನಿಮ್ಮ ತಂದೆಯವರಿಂದಲೂ ಏನೂ ಮಾಡಲು ಸಾಧ್ಯವಾಗಿಲ್ಲ. ಅದು ಯಾವುದೇ ವ್ಯಾವಹಾರಿಕ ಸಂಸ್ಥೆಯಲ್ಲ, ನೋಂದಣಿ ಮಾಡಿಕೊಳ್ಳಬೇಕಾದ ಅಗತ್ಯವೂ ಇಲ್ಲ” ಎಂದು ಹೇಳಿದ್ದಾರೆ.“ಗೃಹ ಸಚಿವರಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುವ ಬದಲು ವಿವಾದ ಸೃಷ್ಟಿಸುವ ಕೆಲಸ ಮಾಡಬೇಡಿ. ನೀವು ಹಚ್ಚುವ ಬೆಂಕಿಯೇ ನಿಮ್ಮನ್ನು ಸುಡುವ ಪರಿಸ್ಥಿತಿ ಬರಬಹುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಒಂದು ಸಾಮಾಜಿಕ ಜಾಲತಾಣದ ಪೋಸ್ಟ್‌ನಿಂದ ಆರಂಭವಾದ ಈ ವಿವಾದ ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ದೊಡ್ಡ ರಾಜಕೀಯ ವಾಕ್ಸಮರವಾಗಿ ಮಾರ್ಪಟ್ಟಿದೆ. ಆರ್‌ಎಸ್‌ಎಸ್‌ ಕುರಿತು ಪ್ರಿಯಾಂಕ್ ಖರ್ಗೆ ಮಾಡಿರುವ ಟೀಕೆ ಮತ್ತು ಅದಕ್ಕೆ ಬಿಜೆಪಿ ನಾಯಕರ ಪ್ರತಿಕ್ರಿಯೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ. ಮುಂದಿನ ದಿನಗಳಲ್ಲಿ ಈ ವಿವಾದ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #bengaluru#bjp#byvijayendra#congress#ctravi#KannadaNews#KarnatakaPolitics#latestnews#NewsUpdate#PoliticalClash#PoliticalWar#priyankkharge#RSSDebate#trendingnews#XPostbreakingnewsIndiaPoliticskarnatakanewsPoliticalControversypratidavaniRSS
Previous Post

ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

Next Post

ನೈತಿಕತೆಯಿಲ್ಲದ ಮಾಧ್ಯಮ ಸೇತುವೆಗಳು

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

by ಪ್ರತಿಧ್ವನಿ
July 14, 2026
0

ನವದೆಹಲಿ: ದೇಶಾದ್ಯಂತ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಸಿಲಿಂಡರ್ ಬುಕ್ಕಿಂಗ್, ರೀಫಿಲ್ಲಿಂಗ್, ಹೊಸ ಕನೆಕ್ಷನ್ ಹಾಗೂ ಕನೆಕ್ಷನ್ ರದ್ದತಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
Next Post
ನೈತಿಕತೆಯಿಲ್ಲದ ಮಾಧ್ಯಮ ಸೇತುವೆಗಳು

ನೈತಿಕತೆಯಿಲ್ಲದ ಮಾಧ್ಯಮ ಸೇತುವೆಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada