ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಸಿಎಂ(CM) ಕುರ್ಚಿಯ ಶೀತಲ ಸಮರ ಸದ್ಯ ತಣ್ಣಗಾಗಿದ್ದು, ಕಾಂಗ್ರೆಸ್ ನಾಯಕರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದಾರೆ. ಹೀಗಾಗಿ ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿನಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(D. K Shivakumar) ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ನೀಡಿದ್ದು, ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ.

ಈ ಸಭೆಯ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ʼರಾಜಕೀಯ ಶಾಶ್ವತ ಅಲ್ಲ, ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲʼ ಎನ್ನುವ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ಇಂದಿನ ಅಧಿಕಾರಿಗಳ ಸಭೆ ಮುಗಿಸಿ ಹೊರಬರುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಅಡ್ಡ ಬಂದು ನಿಂತ ಬೇಳೂರು ಗೋಪಾಲಕೃಷ್ಣ, ಇಂದಿನ ಬ್ರೇಕ್ಫಾಸ್ಟ್ ಮೀಟಿಂಗ್ ಉದ್ದೇಶಿಸಿ ಹಾಸ್ಯವಾಗಿ ನಾಟಿ ಕೋಳಿ ಸಾಂಬಾರ್ ಹೇಗಿತ್ತು ಸಾರ್? ಎಂದು ಪ್ರಶ್ನಿಸಿದ್ದಾರೆ.

ಬೇಳೂರು ಗೋಪಾಲಕೃಷ್ಣ ಅವರ ಈ ಪ್ರಶ್ನೆಗೆ ಗಂಭೀರವಾಗಿ ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ ʼರಾಜಕೀಯ ಶಾಶ್ವತ ಅಲ್ಲ ಗೋಪಾಲಕೃಷ್ಣ, ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿʼ ಎನ್ನುವ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.












