ಇಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ( CM Siddaramaiah ) ಅವರು ಸಿಎಂ ( CM ) ಆದ ಬಳಿಕ ಮೊದಲ ಬಾರಿಗೆ, ಉಡುಪಿ( Udupi ) ಜಿಲ್ಲೆಗೆ ಭೇಟಿ ( Visit ) ನೀಡಿದ್ದಾರೆ, ಈ ವೇಳೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಒಂದಷ್ಟು ಮಾಹಿತಿಗಳನ್ನ ಕೂಡ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಮಳೆ ( Rain ) ಬಗ್ಗೆ ಮಾತನಾಡಿದ ಸಿಎಂ ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ 5 ಲಕ್ಷ ರೂ ಪರಿಹಾರ ನೀಡಬೇಕು. ಇದು ಸರ್ಕಾರದ ನಿರ್ಧಾರ. ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ-ಇಲ್ಲವೋ, ಹಕ್ಕು ಪತ್ರ ಇದೆಯೋ-ಇಲ್ಲವೋ ಎನ್ನುವುದನ್ನು ನೋಡದೆ ಮಳೆಯಿಂದ ಬಿದ್ದ ಮನೆಗೆ ಪರಿಹಾರ ನೀಡಿ. ಮೊದಲು ಮನೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿನೆಯನ್ನ ನೀಡಿದ್ದಾರೆ.

ಮಳೆ ಹಾನಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಮೀಕ್ಷೆ ನಡೆಸಿ. ಬೆಳೆ ಹಾನಿಗೊಳಗಾದವರಿಗೆ ತಪ್ಪದೆ ಪರಿಹಾರ ಸಿಗಬೇಕು. ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ. ಬೆಳೆ ಹಾನಿ ಆದವರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು. ಒಮ್ಮೆ ಬೆಳೆ ಪರಿಹಾರ ಕೊಟ್ಟ ಬಳಿಕ ಪರ್ಯಾಯ ಬೆಳೆ ಬೆಳೆ ಬೆಳೆಯಲು ಅಗತ್ಯವಾದ ಬೀಜ, ಗೊಬ್ಬರ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಿ. ಅಡಕೆ ಬೆಳೆಗೆ ಬಂದಿರುವ ಎಲೆಚುಕ್ಕೆ ರೋಗದ ಬಗ್ಗೆ ಕೃಷಿ ವಿಜ್ಞಾನಿಗಳ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.
ಈ ಸುದ್ದಿಯನ್ನು ಓದಿ ; ಮಣಿಪುರ ಹಿಂಸಾಚಾರ | ದೆಹಲಿ ಮಹಿಳಾ ಆಯೋಗದಿಂದ ರಾಷ್ಟ್ರಪತಿಗೆ ಮಧ್ಯಂತರ ಶಿಫಾರಸು

ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಆಗಿರುವ ಕಾಲು ಸಂಕದಿಂದ ಆಗಿರುವ ಅನಾಹುತಗಳನ್ನು ತಪ್ಪಿಸಲು ಸೇತುವೆಗಳನ್ನು ನಿರ್ಮಿಸಬೇಕು. ನರೇಗಾ ಮತ್ತು ಲೋಕೋಪಯೋಗಿ ಜಂಟಿಯಾಗಿ ಸೇತುವೆಗಳನ್ನು ನಿಮಿಸಲು ಯೋಜನೆ ಸಿದ್ದಪಡಿಸಿ ಮತ್ತು ಎರಡು ವರ್ಷಗಳಲ್ಲಿ ಸೇತುವೆ ನಿರ್ಮಾಣ ಕೆಲಸಗಳು ಮುಗಿಯುವ ರೀತಿಯಲ್ಲಿ ಕೆಲಸ ಮಾಡಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.