ಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಈ ಬಾರಿ ಕಾಂಗ್ರೆಸ್ಗೆ ಅಧಿಕಾರ ಸಿಗಲಿದೆ ಎಂದು ಹೇಳಲಾಗುತ್ತಿದ್ದು ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಕಳೆದ ಬಾರಿಯ ಸಮೀಕ್ಷೆಗಳಲ್ಲಿಯೂ ಕಾಂಗ್ರೆಸ್ಗೆ ಗೆಲುವು ಪಕ್ಕಾ ಎಂದು ಹೇಳಲಾಗಿತ್ತು. ಆದರೆ ಫಲಿತಾಂಶ ಬಂದ ಮೇಲೆ ಸಮೀಕ್ಷೆಯ ಲೆಕ್ಕಾಚಾರಗಳು ಉಲ್ಟಾ ಆಗಿದ್ದವು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಈ ಬಾರಿಯೂ ಸಮೀಕ್ಷೆಯ ಲೆಕ್ಕಾಚಾರಗಳು ಸುಳ್ಳಾಗಲಿವೆ. ನಾವು ಸ್ಪಷ್ಟ ಬಹುಮತದೊಂದಿಗೆ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.