ನಿರ್ದೇಶಕ ಮಣಿರತ್ನಂ ನಿರ್ದೇಶನದ ಚೋಳರ ಗತ ಕಾಲದ ವೈಭವ ಎಂದೇ ಬಣ್ಣಿಸಿರುವ ಪೊನ್ನಿಯನ್ ಸೆಲ್ವನ್ ಚಿತ್ರವು ಬಿಡುಗಡೆಯಾದ ಮೂರೇ ದಿನಕ್ಕೆ ಬಾಕ್ಸ್ ಆಫೀಸಿನಲ್ಲಿ ಧೂಳೆಬ್ಬಿಸಿದೆ.
ಚಿತ್ರ ಬಿಡುಗಡೆಯಾದ ಮೂರು ದಿನಗಳಲ್ಲಿ ವಿಶ್ವದಾದ್ಯಂತ ಒಟ್ಟು 230 ಕೋಟಿ ರೂಪಾಯಿ ಗಳಿಕೆ ಮಾಡಿದ್ದು ಸೋಮವಾರ 250 ಕೋಟಿ ದಾಟಬಹುದು ಎಂದು ಹೇಳಲಾಗುತ್ತಿದೆ.
ಚಿತ್ರದಲ್ಲಿ ಚಿಯಾನ್ ವಿಕ್ರಂ, ಐಶ್ವರ್ಯ ರೈ ಬಚ್ಚನ್, ಕಾರ್ತಿ, ಜಯಂ ರವಿ, ತ್ರಿಶಾ ನಟಿಸಿದ್ದು ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ.






