ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂಗೆ ಸೋಮವಾರ ಕೋವಿಡ್ ಸೋಂಕು ತಗುಲಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಮಣಿರತ್ನಂ ಕಳೆದ ವಾರ ತಮ್ಮ ಮಹತ್ವಾಕಾಂಕ್ಷೆಯ ಸಿನಿಮಾ ‘ಪೊನ್ನಿಯಿನ್ ಸೆಲ್ವನ್’(PS- 1) ಟೀಸರ್ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದರು.

ಬಿಡುಗಡೆ ಸಮಾರಂಭದಲ್ಲಿ ಜಯಂ ರವಿ, ಕಾರ್ತಿ, ವಿಕ್ರಮ್ ಪ್ರಭು, ತ್ರಿಶಾ ಮತ್ತು ಎಆರ್ ರೆಹಮಾನ್ ಸೇರಿದಂತೆ ಅನೇಕ ಸ್ಟಾರ್ಗಳು ಭಾಗಿಯಾಘಿದ್ದರು.