ಪ್ರವಾಸಕ್ಕೆಂದು ಬಂದಿದ್ದ ಭಾರದ ಗರ್ಭಿಣಿ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೇ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಪೋರ್ಚುಗಲ್ ಆರೋಗ್ಯ ಸಚಿವೆ ಸ್ಥಾನಕ್ಕೆ ಮಾರ್ಟಾ ಟೆಮಿಡೊ ರಾಜೀನಾಮೆ ಸಲ್ಲಿಸಿದ್ದಾರೆ.
ತುರ್ತು ಪ್ರಸೂತಿ ಸೇವೆಗಳನ್ನು ತಾತ್ಕಾಲಿಕವಾಗಿ ಮುಚ್ಚಿದ್ದರಿಂದಾಗಿ ಹಾಸಿಗೆಯ ಕೊರತೆ ಉಂಟಾಗಿತ್ತು. ಇದರಿಂದಾಗಿ 34 ವರ್ಷದ ಭಾರತೀಯ ಗರ್ಭಿಣಿಯನ್ನು ಬೇರೆ ಆಸ್ಪತ್ರೆಗೆ ಕಳುಹಿಸಿಕೊಡುವ ಸಮಯದಲ್ಲಿ ಮೃತಪಟ್ಟಿದ್ದರು.
ಭಾರತೀಯ ಮಹಿಳೆ ಆಸ್ಪತ್ರೆಯಲ್ಲಿ ಹೆರಿಗೆಗೆ ಹಾಸಿಗೆ ಸಿಗದೇ ಮೃತಪಟ್ಟ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಾರ್ಟಾ ಟೆಮಿಡೊ ಆರೋಗ್ಯ ಸಚಿವೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಲಿಸ್ಬನ್ನಲ್ಲಿ ಗರ್ಭಿಣಿ ಮೃತಪಟ್ಟ 5 ಗಂಟೆಯ ನಂತರ ರಾಜೀನಾಮೆ ಘೋಷಿಸಿದ ನಂತರ ಮಾತನಾಡಿದ ಮಾರ್ಟಾ ಟೆಮಿಡೊ, ಯಾವುದೇ ಷರತ್ತುಗಳನ್ನು ಹೊಂದಿಲ್ಲ. ರಾಜೀನಾಮೆಯನ್ನು ಪ್ರಧಾನಮಂತ್ರಿ ಅವರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
31 ವಾರಗಳ ಗರ್ಭಿಣಿಯಾಗಿದ್ದ ಭಾರತೀಯ ಮಹಿಳೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ಅತಿದೊಡ್ಡ ಆರೋಗ್ಯ ಸೌಲಭ್ಯಗಳಲ್ಲಿ ಒಂದಾದ ಸಾಂಟಾ ಮಾರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆಕೆಯ ಆರೋಗ್ಯ ಸ್ಥಿತಿಯನ್ನು ಸ್ಥಿರಗೊಳಿಸಲಾಯಿತು.
ನವಜಾತ ಶಿಶುಗಳ ವಿಭಾಗ ತುಂಬಿದ್ದರಿಂದ ಗರ್ಭಿಣಿಯನ್ನು ಡಿ ಸಾಂಟಾ ಮರಿಯಾ ಆಸ್ಪತ್ರೆಯಿಂದ ಸಾವೊ ಫ್ರಾನ್ಸಿಸ್ಕೊ ಕ್ಸೇವಿಯರ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆದರೆ ಮಾರ್ಗಮಧ್ಯೆ ಆಕೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ.