• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Top Story, ಇತರೆ / Others, ಕರ್ನಾಟಕ
0
16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು,ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713 ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66 % ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದರು.

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ , ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ ಎಂದರು.

Tags: 16th FinanceCM Siddaramaiah‌Congress PartyDCM DK Shivakumar
Previous Post

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಹೈಕೋರ್ಟ್‌ನಲ್ಲಿ ಬಿಗ್ ರಿಲೀಫ್!

Next Post

ಸಿಎಂ ಸಿದ್ದರಾಮಯ್ಯ ಪತ್ನಿಗೆ 15 ಸೈಟ್ ಅಚ್ಚರಿ ಮಾಹಿತಿ ಬಹಿರಂಗ ಪಡಿಸಿದ ವಿಜಯೇಂದ್ರ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post

ಸಿಎಂ ಸಿದ್ದರಾಮಯ್ಯ ಪತ್ನಿಗೆ 15 ಸೈಟ್ ಅಚ್ಚರಿ ಮಾಹಿತಿ ಬಹಿರಂಗ ಪಡಿಸಿದ ವಿಜಯೇಂದ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada